ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಆನೆಯತ್ತ ಗುಂಡು ಹಾರಿಸಿರುವುದು ವಿವಾದಕ್ಕೆ ಕಾರಣವಾಗಿದೆ.
ಹೆಡಿಯಾಲ ವಲಯದಲ್ಲಿ ಕಬ್ಬಿಣದ ಬೇಲಿ ದಾಟಲು ಯತ್ನಿಸುತ್ತಿದ್ದ ಒಂಟಿ ಸಲಗದತ್ತ ಅರಣ್ಯ ಇಲಾಖೆಯ ಜೀಪಿನಲ್ಲಿದ್ದ ಇಲಾಖೆಯ ಕಾಯಂ ನೌಕರ ರಹೀಂ ಗುಂಡು ಹಾರಿಸುವ ದೃಶ್ಯ ಸಾಮಾಜಿ ಜಾಲತಾಣದಲ್ಲಿ ವೈರಲ್‌ ಆಗಿದೆ.
ವಿಡಿಯೋ ವೀಕ್ಷಣೆ ಮಾಡಿದ ಬಂಡೀಪುರ ಹುಲಿಯೋಜನೆ ನಿರ್ದೇಶಕ ಟಿ.ಬಾಲಚಂದ್ರ ಅವರು ಗುಂಡು ಹಾರಿಸಿದ ನೌಕರ ರಹೀಂ ಹಾಗೂ ಇದನ್ನು ವಿಡಿಯೋ ಚಿತ್ರೀಕರಣ ಮಾಡಿದ ಗೌತ್ತಿಗೆ ನೌಕರ ಉಮೇಶ್​ ಅವರನ್ನು ಸೇವೆಯಿಂದ ವಜಾಗೊಳಿಸಿಆದೇಶ ಹೊರಡಿಸಿದ್ದಾರೆ.
ಘಟನೆ ನಂತರ ಇಬ್ಬರಿಗೂ ಕಾರಣ ಕೇಳಿ ನೋಟಿಸ್​ ಜಾರಿ ಮಾಡಲಾಗಿತ್ತು. ನೋಟಿಸ್​ಗೆ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಟಿ. ಬಾಲಚಂದ್ರ ಹೇಳಿದ್ದಾರೆ.
ಅರಣ್ಯ ಇಲಾಖೆಯ ಕ್ಷೇಮಾಭಿವೃದ್ಧಿ ನೌಕರರಾಗಿ ರಹೀ ಸೇವೆ ಸಲ್ಲಿಸುತ್ತಿದ್ದರು. ಉಮೇಶ್​ ಗುತ್ತಿಗೆ ಆಧಅರದ ಮೇಲೆ ಕೆಲಸ ನಿರ್ವಹಿಸುತ್ತಿದ್ದರು. ಆನೆಯತ್ತ ಗುಂಡು ಹಾರಿಸಿರುವ ದೃಶ್ಯಕ್ಕೆ ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಮಾರಕ ವೈರಸ್​ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡ ಮಹಿಳೆಯ ಅನುಭವ ಕೇಳಿದರೆ ರೋಮಾಂಚನವಾಗುತ್ತದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 10 =
Remember me
