ಕೊಡಗು/ಚಿಕ್ಕಮಗಳೂರು:ರಾಜ್ಯದಲ್ಲಿ ಮತ್ತೆ ಮತ್ತೆ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಕಾಡುಗಳು ಹೊತ್ತಿ ಉರಿಯಲಾರಂಭಿಸಿವೆ. ಮಾತ್ರವಲ್ಲ, ಧಗಿಧಗಿಸುವ ಬೆಂಕಿಯನ್ನು ಆರಿಸಲು ಹರಸಾಹಸ ಪಡುವಂತಾಗಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ದೊಡ್ಡ ಮಟ್ಟದಲ್ಲಿ ಈ ಕಾಡ್ಗಿಚ್ಚು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡ್ಗಿಚ್ಚು ಮುಂದುವರಿದ್ದು, ಅರಣ್ಯ ಹಾಗೂ ತೋಟಕ್ಕೂ ಬೆಂಕಿ ಬಿದ್ದಿದೆ. ಚಿಕ್ಕಮಗಳೂರಿನ ಬಸರವಳ್ಳಿ ಗ್ರಾಮದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ಅರಣ್ಯ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯತ್ತಿದೆ.
ಇದನ್ನೂ ಓದಿ:ಬಾರ್‌ಗೆ ಬಂದ ಕಡಲಾಮೆ!; ಗ್ರಾಹಕರ ಟೇಬಲ್​ ಕೆಳಗೇ ಇಟ್ಟ ಮೊಟ್ಟೆಗಳ ಸಂರಕ್ಷಣೆ
ಚಾರ್ಮಾಡಿ ಘಾಟಿಯಲ್ಲೂ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಗುಡ್ಡ ತುದಿಯಲ್ಲೆಲ್ಲ ಬೆಂಕಿ ಆವರಿಸಿಕೊಂಡಿದೆ. ಬೆಂಕಿನಿಂದ‌ ಸಸ್ಯ ಸಂಕುಲ, ಸೋಲಾರಣ್ಯಕ್ಕೆ ಹಾನಿಯಾಗಿದೆ. ಗುಡ್ಡದ ತುದಿಯಲ್ಲಿ ಕಾಡ್ಗಿಚ್ಚು ಇರುವುದರಿಂದ ಸ್ಥಳಕ್ಕೆ ತೆರಳಲು ಪರದಾಟ ನಡೆಸುವಂತಾಗಿದೆ.
ಇದನ್ನೂ ಓದಿ:ಪ್ರೀತಿಸಿ ಅಂತರ್ಜಾತಿ ವಿವಾಹವಾದ ಜೋಡಿಗೆ ಗ್ರಾಮದಿಂದಲೇ ಬಹಿಷ್ಕಾರ; ತರಕಾರಿ, ಹಾಲು, ನೀರೂ ತೆಗೆದುಕೊಳ್ಳುವಂತಿಲ್ಲ!
ಮತ್ತೊಂದೆಡೆ ಕೊಡಗಿನ ಭಾಗಮಂಡಲ ವ್ಯಾಪ್ತಿಯ ತಾವೂರು, ತಣ್ಣಿಮಾನಿ ಬೆಟ್ಟದಲ್ಲೂ ಕಾಡ್ಗಿಚ್ಚು ಹೊತ್ತಿಕೊಂಡಿದೆ. ಸಂಜೆ ಐದು ಗಂಟೆಯಿಂದ ಕಾಣಿಸಿಕೊಂಡಿರುವ ಬೆಂಕಿಯನ್ನು ನಂದಿಸಲು ಅರಣ್ಯ ಇಲಾಖೆಯವರು ಹರಸಾಹಸ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ತೋಟಗಳಿಗೂ ಬೆಂಕಿ ಹರಡುವ‌ ಸಾಧ್ಯತೆ ಆತಂಕ ಸೃಷ್ಟಿಸಿದೆ.
ಮೇಕಪ್​ನಿಂದಾಗಿ ಬಣ್ಣಗೆಟ್ಟಿತು ವಧುವಿನ ಮುಖ; ಮದುವೆಯೇ ಬೇಡ ಎಂದ ವರ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − thirteen =
Remember me
