ಬೆಂಗಳೂರು:ಇಂದು ನಸುಕಿನಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ವಿರೂಪಾಕ್ಷ ಪುರ ಹೋಬಳಿ ವಿರೂಪಸಂದ್ರ ಗ್ರಾಮದಲ್ಲಿ ಮಾವಿನ ತೋಟ ಕಾಯುತ್ತಿದ್ದ ವೀರಭದ್ರ (40) ಮತ್ತು ಮೊನ್ನೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಮಳೆಯೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ರೈತ ರವಿ (40) ಎಂಬುವರು ಮೃತಪಟ್ಟಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ಯಾವುದೇ ವ್ಯಕ್ತಿ ಕಾಡುಪ್ರಾಣಿಗಳ ದಾಳಿಯಿಂದ ಸಾವಿಗೀಡಾಗಬಾರದು. ಇನ್ನು ಮುಂದೆ ಪ್ರಾಣಿಗಳ ಮತ್ತು ಮಾನವನ ಸಂಘರ್ಷದಿಂದ ಹೆಚ್ಚಿನ ಜೀವ ಹಾನಿ ಆಗದ ರೀತಿಯಲ್ಲಿ ಕ್ರಮ ವಹಿಸಲು ಮತ್ತು ನಾಡಿಗೆ ದಾಳಿ ಇಟ್ಟಿರುವ ಆನೆಗಳನ್ನು ಕಾಡಿಗೆ ಅಟ್ಟಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಸಾರ್ವಜನಿಕರಿಗೆ ಶುಭ ಸುದ್ದಿ: ಅಡುಗೆ ಎಣ್ಣೆ ಬೆಲೆ ಶೀಘ್ರವೇ 8 ರಿಂದ 12 ರೂ.ಇಳಿಕೆ
ಮೃತರಾದ ವೀರಭದ್ರ ಮತ್ತು ರವಿಯವರ ಕುಟುಂಬಕ್ಕೆ ನಿಯಮಾನುಸಾರ 15 ಲಕ್ಷ ರೂ. ಪರಿಹಾರವನ್ನು ಒದಗಿಸಲಾಗುವುದು. ಯಾವುದೇ ಪರಿಹಾರ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ, ಆದರೆ ಅವರ ಕುಟುಂಬಕ್ಕೆ ಆಸರೆ, ಆಧಾರವಾಗುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ತಕ್ಷಣವೇ ಎಲ್ಲಿ ಹೆಚ್ಚಿನ ಆನೆಗಳ ದಾಳಿ ಪ್ರದೇಶವಿದೆಯೋ ಅಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸಿ ಇಂತಹ ಅನಾಹುತಗಳನ್ನು ತಪ್ಪಿಸುವುದು ಅಗತ್ಯವಾಗಿದೆ. ಇದಕ್ಕೆ ಮುಂಬರುವ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಒದಗಿಸುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮೃತರಿಬ್ಬರ ಕುಟುಂಬಕ್ಕೆ ಸಾವಿನ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.
ಒಡಿಶಾ ರೈಲು ದುರಂತ: 288ಕ್ಕೇರಿದ ಮೃತರ ಸಂಖ್ಯೆ, ಘಟನಾ ಸ್ಥಳಕ್ಕೆ ಇಂದು ಪ್ರಧಾನಿ ಮೋದಿ ಭೇಟಿ

ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ ಮಾಡಿದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
