ಬೆಳಗಾವಿ:ರಾಜ್ಯದಲ್ಲಿ ಹೆಣ್ಣು ಭ್ರೂಣಗಳ ಹತ್ಯೆ ತಡೆಯಲು, ಸ್ಕ್ಯಾನಿಂಗ್​ ಸೆಂಟರ್​ಗಳ ಮೇಲೆ ತೀವ್ರ ನಿಗಾ ವಹಿಸಲು ರಾಜ್ಯಮಟ್ಟದ ಕಾರ್ಯ ಪಡೆ ರಚನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಹೆಣ್ಣು ಭ್ರೂಣ ಹತ್ಯೆ ಕುರಿತು ಪರಿಷತ್​ನಲ್ಲಿ ಜೆಡಿಎಸ್​ನ ಕೆ.ಎ.ತಿಪ್ಪೇಸ್ವಾಮಿ, ಬಿ.ಎಂ.ಫಾರೂಖ್, ಟಿ.ಎ.ಶರವಣ, ಸಿ.ಎನ್.ಮಂಜೇಗೌಡ , ಕಾಂಗ್ರೆಸ್​ನ ಉಮಾಶ್ರೀ, ಬಿಜೆಪಿಯ ಭಾರತಿ ಶೆಟ್ಟಿ ಪ್ರಸ್ತಾಪಿಸಿದರು.
ಈ ಕುರಿತು ಸಚಿವರು ಸದನಕ್ಕೆ ಮಾಹಿತಿ ನೀಡಿ, ರಾಜ್ಯದಲ್ಲಿ 6,395 ಸ್ಕ್ಯಾನಿಂಗ್​ ಸೆಂಟರ್ ನೋಂದಣಿಯಾಗಿದ್ದು, ಅದರಲ್ಲಿ 6068 ಖಾಸಗಿ, 327 ಸರ್ಕಾರಿ ಸ್ಕ್ಯಾನಿಂಗ್ ಸೆಂಟರ್ ಕಾರ್ಯನಿರ್ವಹಿಸುತ್ತಿವೆ. ಬಾಲಿಕಾ ಸಾಫ್ಟ್್ಟೇರ್ ಮೂಲಕ ನೋಂದಣಿ ಕಡ್ಡಾಯಗೊಳಿಸಲಾಗುತ್ತಿದೆ. ಪಿಸಿ ಮತ್ತು ಪಿಎನ್​ಡಿಟಿ ಕಾಯ್ದೆ ಅಡಿ ಎಲ್ಲ ಶಾಸನಬದ್ಧ ಸಮಿತಿಗಳು ರಾಜ್ಯ, ಜಿಲ್ಲಾ ಮಟ್ಟದಲ್ಲಿ ರಚನೆಗೊಂಡಿವೆ. ಈ ಸಮಿತಿಗಳು ಪ್ರತಿ 3 ತಿಂಗಳಿಗೊಮ್ಮೆ ಸ್ಕಾ್ಯನಿಂಗ್ ಸೆಂಟರ್ ತಪಾಸಣೆ ನಡೆಸಲಿವೆ. ಇಲ್ಲಿಯವರೆಗೆ 4,408 ಸ್ಕಾ್ಯನಿಂಗ್ ಸೆಂಟರ್​ಗಳನ್ನು ತಪಾಸಣೆ ನಡೆಸಲಾಗಿದೆ. ಈ ವೇಳೆ ಸಾಕಷ್ಟು ಪ್ರಮಾಣದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿರುವುದು ಬೆಳಕಿಗೆ ಬಂದಿದು, 100 ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 24 ಪ್ರಕರಣಗಳನ್ನು ದಂಡ ವಿಧಿಸಿ ಖುಲಾಸೆಗೊಳಿಸಲಾಗಿದೆ ಎಂದರು.
50ಸಾವಿರ ರೂ. ಬಹುಮಾನ:ರಾಜ್ಯದ ಯಾವುದೇ ಭಾಗದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂಥ ಸ್ಕ್ಯಾನಿಂಗ್ ಸೆಂಟರ್, ಆಸ್ಪತ್ರೆ, ವೈದ್ಯರು, ದಲ್ಲಾಳಿಗಳು, ಗರ್ಭಿಣಿಯರು ಹಾಗೂ ಸಂಬಂಧಿಕರ ವಿರುದ್ಧ ಮಾಹಿತಿ ನೀಡುವವರಿಗೆ 50 ಸಾವಿರ ರೂ. ಬಹುಮಾನ ನೀಡಲಾಗುತ್ತಿದೆ ಎಂದರು.
ಜೀವಾವಧಿ ಶಿಕ್ಷೆ ನೀಡಿಸಾಮಾಜಿಕ ಪಿಡುಗು ಆಗಿರುವ ಹೆಣ್ಣು ಭ್ರೂಣ ಹತ್ಯೆ ಮಾಡುವರನ್ನು ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು ಎಂದು ವಿಧಾನಪರಿಷತ್​ನಲ್ಲಿ ಎಲ್ಲ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು. ಪರಿಷತ್​ನಲ್ಲಿ ಮಂಗಳವಾರ ಹೆಣ್ಣು ಭ್ರೂಣ ಹತ್ಯೆ ಕುರಿತು ನಡೆದ ಚರ್ಚೆಯಲ್ಲಿ ಸದಸ್ಯರಾದ ಉಮಾಶ್ರೀ, ತೇಜಸ್ವಿನಿಗೌಡ, ಭಾರತಿ ಶೆಟ್ಟಿ ಮಾತನಾಡಿ,ರಾಜ್ಯದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ವ್ಯಾಪಕವಾಗಿ ನಡೆಯುತ್ತಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಮಹಿಳೆಯನ್ನು ಗೌರವಿಸುವ ಸಮಾಜದಲ್ಲಿ ಇದೆಂತ ಕೃತ್ಯಗಳು ನಡೆಯುತ್ತಿವೆ. ಸರ್ಕಾರವು ಕಾನೂನು ಬೀಗಗೊಳಿಸಲು ಕೆಲಸ ಮಾಡಬೇಕು ಎಂದರು.
ಟೆಂಡರ್ ಪದ್ಧತಿ ಬದಲುಸದ್ಯ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಔಷಧ ಪೂರೈಕೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವ್ಯವಸ್ಥೆಯಲ್ಲಿರುವ ಟೆಂಡರ್ ಪ್ರಕ್ರಿಯೆ ಸಂಪೂರ್ಣ ಬದಲಾಯಿಸಿ ಹೊಸ ಟೆಂಡರ್ ಪದ್ಧತಿ ಜಾರಿಗೊಳಿ ಸಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಯುವನಿಧಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್; ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 14 =
Remember me
