ಹುಬ್ಬಳ್ಳಿ:ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ವಿದ್ಯುತ್ ದರ ಏರಿಕೆ ವರದಿಯನ್ನು ಒಪ್ಪಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ವರದಿಗೆ ಒಪ್ಪಿಗೆ ನೀಡಿದ್ದರಿಂದ ವಿದ್ಯುತ್ ದರ ಹೆಚ್ಚಳವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಕೆ‌.ಇ.ಆರ್.ಸಿ ಅದೊಂದು ಸ್ಟೆಚುಟರಿ ಬಾಡಿಯವರು ಮಾರ್ಚ್​ನಲ್ಲಿ ಹೆಚ್ಚಳದ ಪ್ರಸ್ತಾವನೆ ಕೊಟ್ಟರೂ, ನಾವು ಒಪ್ಪಿಗೆ ಕೊಟ್ಟಿರಲಿಲ್ಲ. ನಾವು ವಿದ್ಯುತ್ ದರ್ ಹೆಚ್ಚಳದ ಯಾವುದೇ ಆದೇಶ ಮಾಡಿಲ್ಲ. ಕಾಂಗ್ರೆಸ್​ನವರು ಬಂದ ಮೇಲೆಯೇ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಅವರ ಆಜ್ಞೆಯಿಂದಲೇ ವಿದ್ಯುತ್ ದರ ಹೆಚ್ಚಳ ಆಗಿದೆ ಎಂದರು.
ಏಪ್ರಿಲ್​ನಿಂದ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಇದು ಬಹಳ ದೊಡ್ಡ ಭಾರ ಇದೆ. ಬರುವ ದಿನಗಳಲ್ಲಿ ಎಲೆಕ್ಟ್ರಿಸಿಟಿ ಕ್ಷೇತ್ರ ಬಹಳ ಸಂಕಷ್ಟಕ್ಕೆ ಈಡಾಗಲಿದೆ. ಸಾರಿಗೆ ಹಾಗೂ ವಿದ್ಯುತ್ ಕ್ಷೇತ್ರಗಳಗೆ ಹಣ ಕೊಡಬೇಕು. ಒಂದು ವರ್ಷ ಬಿಟ್ಟು ಸಬ್ಸಿಡಿ ಕೊಟ್ಟರೆ ಆಗಲ್ಲ. ಮುಂಗಡವಾಗಿ ಸಬ್ಸಿಡಿ ಕೊಡಬೇಕು ಎಂದರು.
ಇದನ್ನೂ ಓದಿ:ಬೆಲೆ ಏರಿಸುತ್ತಾ ಹೋದರೆ ಜನರೇ ಸಿದ್ದರಾಮಯ್ಯನವರ ಸಿಎಂ ಖುರ್ಚಿ ಉರುಳಿಸುವುದು ಗ್ಯಾರಂಟಿ: ರಾಜ್ಯ ಬಿಜೆಪಿ
ರಾಜ್ಯದ ಶಾಲಾ ಮಕ್ಕಳಿಗೆ ಸ್ಕೂಲ್ ಬಸ್ ಕೊಡಬೇಕು. ಶಾಲಾ ಮಕ್ಕಳ ಸುರಕ್ಷತೆ ಆಗುತ್ತದೆ. ಈಗಾಗಲೇ ನಾವು ಆಜ್ಞೆ ಕೂಡ ಮಾಡಿದ್ದೇವೆ. ಇದಕ್ಕೆ ಬಜೆಟ್ ನಲ್ಲಿ ಹಣ ಕೂಡ ಇಟ್ಟಿದ್ದೇವೆ. ಸಾರಿಗೆ ಹಾಗೂ ವಿದ್ಯುತ್ ಕ್ಷೇತ್ರಗಳಿಗೆ ಸರಿಯಾಗಿ ಹಣ ಕೊಟ್ಟು ನಿರ್ವಹಿಸದೇ ಇದ್ದರೆ, ಸಾರಿಗೆ ಸ್ಥಗಿತ ಆಗುವುದು, ವಿದ್ಯುತ್ ಶಕ್ತಿ ನಿಲ್ಲುವುದು ಗ್ಯಾರಂಟಿ ಆಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ‌ ಆತಂಕ ವ್ಯಕ್ತಪಡಿಸಿದರು.
ಬೆಂಗಳೂರು: ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡಿದೆ ಎಂದು ವಿಪಕ್ಷಗಳು ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿವೆ. ದರ ಏರಿಕೆ ನಿರ್ಧಾರ ಹಿಂದಿನ ಬಿಜೆಪಿ ಸರ್ಕಾರದ ಆಡಳಿತದ ಸಂದರ್ಭದಲ್ಲಿ ನಿರ್ಧಾರವಾಗಿತ್ತು. ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿದ್ದರಿಂದ ದರ ಬದಲಾವಣೆ ಜಾರಿಯಾಗಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಜೂ.11ರಂದು ಸ್ಪಷ್ಟನೆ ನೀಡಿದ್ದರು.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಮೇ 12ರಂದು ಪ್ರತಿ ಯುನಿಟ್‌ಗೆ 70 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಚುನಾವಣಾ ನೀತಿಸಂಹಿತೆ ಕಾರಣದಿಂದ ಈಗ ಜಾರಿಯಾಗಿದೆ. ದುಪ್ಪಟ್ಟಾದ ಮೊತ್ತ ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಪೂರ್ವಾನ್ವಯ ಆಗಲಿದೆ. ಇದರಿಂದಾಗಿ ಏಪ್ರಿಲ್ ಹಾಗೂ ಮೇ ತಿಂಗಳಿಗೆ ಅನ್ವಯಿಸುವ ದರ ಹೆಚ್ಚಳದ ಬಾಬ್ತನ್ನು ಜೂನ್ ಬಿಲ್‌ನಲ್ಲಿ ನಮೂದಿಸಲಾಗಿದೆ. ಇದು ವಿದ್ಯುತ್ ಬಿಲ್ ಮೊತ್ತ ದುಪ್ಪಟ್ಟು ಆಗಿರುವುದಕ್ಕೆ ಭಾರಿ ಕಾರಣವಾಗಿ ಗ್ರಾಹಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ:ಝೀರೋ ಟ್ರಾಫಿಕ್ ಮಾಡಿದ್ದಕ್ಕೆ ಮೈಸೂರು ಪೊಲೀಸ್ ಆಯುಕ್ತರ ಮೇಲೆ ಸಿದ್ದರಾಮಯ್ಯ ಗರಂ!
ಕೆಇಆರ್‌ಸಿ ಪ್ರಸಕ್ತ ಸಾಲಿಗೆ ವಿದ್ಯುತ್ ಶುಲ್ಕವನ್ನು ಒಂದೇ ಸ್ಲಾಬ್‌ಗೆ ಸೀಮಿತ ಮಾಡಿದೆ. ಇದರಿಂದ ಎಷ್ಟು ಪ್ರಮಾಣದ ಯುನಿಟ್ ಬಳಕೆ ಮಾಡಿದರೂ ಪ್ರತಿ ಯುನಿಟ್‌ಗೆ 7 ರೂ. ಪಾವತಿಸಬೇಕು. ಈ ಪದ್ಧತಿ ಪ್ರತಿ ಗ್ರಾಹಕನಿಗೂ ಹೊಡೆತ ನೀಡಿದೆ. 100 ಯುನಿಟ್ ಬಳಸುತ್ತಿದ್ದ ಗೃಹ ಬಳಕೆದಾರರು ಹೆಚ್ಚುವರಿಯಾಗಿ 210 ರೂ. ಪಾವತಿಸಬೇಕಿದೆ. ಹಿಂದೆ 50 ಯುನಿಟ್ ವರೆಗೆ ಮೊದಲ ಸ್ಲಾಬ್, 51-100 ಎರಡನೇ ಸ್ಲಾಬ್ ಹಾಗೂ 101 ಮೇಲ್ಪಟ್ಟ ಯುನಿಟ್‌ಗೆ ಕ್ರಮವಾಗಿ 4.15 ರೂ., 5.60 ರೂ. ಹಾಗೂ 7.15 ರೂ. ನಿಗದಿಯಾಗಿತ್ತು. ಈಗ ಏಕ ಸ್ಲಾಬ್‌ನಿಂದಾಗಿ ಕಡಿಮೆ ವಿದ್ಯುತ್ ಬಳಸುವವರು ಕೂಡ ಯುನಿಟ್ ಒಂದಕ್ಕೆ 7 ರೂ. ಪಾವತಿಸಬೇಕಾಗುತ್ತದೆ. ಇದು ಗ್ರಾಹಕರ ಮೇಲೆ ಕೆಇಆರ್‌ಸಿ ಎಳೆದಿರುವ ಬರೆ ಎಂದು ಹಲವು ನಾಗರಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
200 ಯುನಿಟ್‌ವರೆಗೆ ಉಚಿತ ವಿದ್ಯುತ್‌ ಪೂರೈಸುವ ‘ಗೃಹಜ್ಯೋತಿ’ ಯೋಜನೆ ಆಗಸ್ಟ್ ನಿಂದ ಜಾರಿಗೆ ಬರಲಿದೆ. ಅಂದರೆ ಜುಲೈನಲ್ಲಿ ಬಳಸಿದ ವಿದ್ಯುತ್‌ಗೆ ಗ್ರಾಹಕರು ಆಗಸ್ಟ್‌ನಲ್ಲಿ ಪಾವತಿಸಬೇಕಿದ್ದ ಬಿಲ್‌ ಶೂನ್ಯ ಆಗಿರಲಿದೆ. ಆದರೆ, ಯಾವುದೇ ಬಾಕಿ ಉಳಿಸಿಕೊಂಡಿರುವಂತಿಲ್ಲ ಎಂಬ ಷರತ್ತು ವಿಧಿಸಲಾಗಿದೆ. ಹೀಗಾಗಿ ಬಾಕಿ ಉಳಿಸಿಕೊಂಡಿರುವ ಫಲಾನುಭವಿಗಳಿಂದ ಹಿಂಬಾಕಿ ವಸೂಲಿ ಮಾಡುವಂತೆ ಎಲ್ಲ ಎಸ್ಕಾಂಗಳಿಗೆ ನಿರ್ದೇಶನ ನೀಡಲಾಗಿದೆ. ಹೀಗಾಗಿ ಎಸ್ಕಾಂಗಳು ಹಿಂಬಾಕಿ ಇದೇ ತಿಂಗಳ ಬಿಲ್‌ನಲ್ಲಿ ನಮೂದಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
