ಬೆಂಗಳೂರು:ಅಧಿಕಾರ ನಡೆಸಲು ಜನಾದೇಶ ನೀಡಿದರೆ, ಕಾಂಗ್ರೆಸ್​ನವರು ಹೋರಾಟಕ್ಕೆ ಇಳಿದಿರುವುದು ನಾಚಿಕೆಗೇಡು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಿಡಿಕಾರಿದರು.ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಮಾಜಿ ಸಿಎಂ ಬೊಮ್ಮಾಯಿ, ಆರ್​. ಅಶೋಕ್ ಪೊಲೀಸ್ ವಶಕ್ಕೆ
ಪರವಾನಗಿ ಇಲ್ಲದೆ ಪ್ರತಿಭಟನೆ ನಡೆಸಿದ ಕಾರಣಕ್ಕೆ ಪೊಲೀಸರು ವಶಕ್ಕೆ ಪಡೆದು ಕರೆ ತಂದಿದ್ದ ಹೈಗ್ರೌಂಡ್ಸ್ ಠಾಣೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಧಮ್ಮು, ತಾಕತ್ತಿನ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಬಡವರ ಬಗ್ಗೆ ನಿಜವಾದ ಕಾಳಜಿ, ತಾಕತ್ತಿದ್ದರೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಸಂಗ್ರಹಿಸಿ ತಲಾ 15 ಕೆಜಿ ವಿತರಿಸಬೇಕು ಎಂದು ಸಡ್ಡು ಹೊಡೆದರು.
ಚುನಾವಣೆಯಲ್ಲಿ ಪ್ರತಿಯೊಬ್ಬರಿಗೆ ತಲಾ ಹತ್ತು ಕೆ.ಜಿ ಎಂದು ಹೇಳಿದ್ದಾರೆ. ಈಗ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆ.ಜಿ ಜತೆಗೆ 10 ಕೆಜಿ ಪ್ರತಿಯೊಬ್ಬರಿಗೆ ಹಂಚುವ ತಾಕತ್ತು ತೋರಿಸಿ, ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ:ಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಣೆ ಆರೋಪ; ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಕಡೆಗೆ ಬೊಟ್ಟು ಮಾಡಿ ತೋರಿಸುತ್ತದೆ. ಗ್ಯಾರಂಟಿಗಳ ವಿಷಯದಲ್ಲಿ ಸುಳ್ಳು ಜನರಿಗೆ ಮೋಸ ಮಾಡುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ, ಕೇಂದ್ರದ ಅಕ್ಕಿಯನ್ನು ತಮ್ಮದೆಂದು ಹೇಳಿಕೊಳ್ಳುತ್ತಿದೆ. ಕಾಂಗ್ರೆಸ್ ಜನ ವಿರೋಧಿ ನೀತಿ, ಸುಳ್ಳು ಹಾಗೂ ವಂಚನೆ‌ ವಿರುದ್ಧ ಸದನದ ಒಳಗೆ, ಹೋರಾಟ ಮುಂದುವರಿಸುತ್ತೇವೆ. ಎಂದು ಬೊಮ್ಮಾಯಿ‌ ಗುಡುಗಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
