ಬೆಂಗಳೂರು:ವಿಧಾನಸಭೆ ಚುನಾವಣೆ ಸೋಲಿನಿಂದ ಬಿಜೆಪಿಗೆ ಆಗಿರುವ ‘ಹಾನಿ ನಿಯಂತ್ರಣ’ ಹಾಗೂ ನಾಯಕತ್ವದ ಕುರಿತು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ‌ ಶುಕ್ರವಾರ ಮಹತ್ವದ ಮಾತುಕತೆ ನಡೆಸಿದರು.
ಬಿಎಸ್​ವೈ ಅವರನ್ನು ಖುದ್ದು ಭೇಟಿಯಾದ ಬೊಮ್ಮಾಯಿ‌, ಬೆಂಗಳೂರಿನ ಗಾಂಧಿ ಭವನದಲ್ಲಿ ಜೂನ್ 6ರಂದು ಆಯೋಜಿಸಿರುವ ಮಾಜಿ ಸಿಎಂ ಎಸ್.ಆರ್.ಬೊಮ್ಮಾಯಿ‌ ಅವರ 99ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.
ಇದೇ ಸಂದರ್ಭದಲ್ಲಿ ಆರ್​ಎಸ್​ಎಸ್​ನ ಮುಕುಂದ್ ಅವರು ಪಕ್ಷದ ಒಬ್ಬೊಬ್ಬರೇ ಹಿರಿಯ ನಾಯಕರನ್ನು ಆಹ್ವಾನಿಸಿ ಸಮಾಲೋಚನೆ ಮೂಲಕ ಅಭಿಪ್ರಾಯ ಸಂಗ್ರಹಿಸುತ್ತಿರುವ ವಿಚಾರ ಪ್ರಸ್ತಾಪವಾಗಿದೆ.ಇದನ್ನೂ ಓದಿ:ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ: ಪ್ರತಾಪ್ ಸಿಂಹ
ವಿಧಾನ ಮಂಡಲ ಉಭಯ ಸದನಗಳು ಹಾಗೂ ಪಕ್ಷದ ರಾಜ್ಯ ನಾಯಕತ್ವ, ವಿಧಾನಸಭೆ ಚುನಾವಣೆ ಸೋಲಿನಿಂದ ಉಂಟಾಗಿರುವ ಹಾನಿ ನಿವಾರಣೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಕುರಿತು ಪಕ್ಷದ ಹಿರಿಯ ಮುಖಂಡರ ಜತೆಗೆ ಸಂಘದ ಪ್ರಮುಖರು ವಿಚಾರ ವಿನಿಮಯ ನಡೆಸುತ್ತಿದ್ದು, ಪ್ರಾತಿನಿಧ್ಯದಲ್ಲಿ ಸಮತೋಲನ ಮತ್ತು ಕಾಂಗ್ರೆಸ್​ನ ತಂತ್ರಕ್ಕೆ ಪ್ರತಿಯಾಗಿ ಸೂಕ್ತ ಕಾರ್ಯತಂತ್ರ ರೂಪಿಸುವ ಅವಶ್ಯಕತೆ ಕುರಿತು ಬಿಎಸ್ ವೈ ಹಾಗೂ ಬೊಮ್ಮಾಯಿ‌ ವಿಚಾರ ವಿನಿಮಯ ಮಾಡಿಕೊಂಡರು ಎಂದು ಮೂಲಗಳು ತಿಳಿಸಿವೆ.
ವೀರಶೈವ ಲಿಂಗಾಯತ ಒಳ ಪಂಗಡಗಳನ್ನು ಒಬಿಸಿ ಪಟ್ಟಿಗೆ ಸೇರಿಸಿ: ಮಠಾಧೀಶರಿಂದ ಕೇಂದ್ರ ಸರ್ಕಾರಕ್ಕೆ ಒತ್ತಡ

VIDEO| ಮುಗ್ಗರಿಸಿ ಬಿದ್ದ ಅಮೆರಿಕಾ ಅಧ್ಯಕ್ಷ ಜೋ ಬೈಡನ್!

ಲೈಂಗಿಕ ದೌರ್ಜನ್ಯದ ಆರೋಪಿ ಬಿಷಪ್​ರಿಂದ ರಾಜೀನಾಮೆ; ಶಿಸ್ತು ಕ್ರಮ ಅಲ್ಲ ಎಂದ ಚರ್ಚ್!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 + 17 =
Remember me
