ಬೆಂಗಳೂರು:ಚುನಾವಣಾ ಪ್ರಣಾಳಿಕೆ, ಪ್ರಚಾರ ಭಾಷಣದಲ್ಲಿ ಐದು ಗ್ಯಾರಂಟಿಗಳ ಕುರಿತು ಜನರಿಗೆ ಆಶ್ವಾಸನೆ ಕೊಡುವಾಗ ಕಾಂಗ್ರೆಸ್​ನವರಿಗೆ ಸ್ಪಷ್ಟತೆಯಿತ್ತು. ಅಧಿಕಾರಕ್ಕೆ ಬಂದ ಮೇಲೆ ಅನುಷ್ಠಾನಕ್ಕೆ ಅಸ್ಪಷ್ಟತೆ ಕಾಡತೊಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವ್ಯಂಗ್ಯವಾಡಿದರು.
ಇದನ್ನೂ ಓದಿ:ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಬಿ ದಯಾನಂದ ನೇಮಕ
ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಐದು ಗ್ಯಾರಂಟಿಗಳನ್ನು ಈಡೇರಿಸುವುದು ಆರ್ಥಿಕವಾಗಿ ಕಷ್ಟಕರ, ಕಾರ್ಯಸಾಧುವಲ್ಲ ಎಂಬುದು ಎಲ್ಲರಿಗೂ ಗೊತ್ತಿತ್ತು‌. ಆದರೆ ಹತಾಶರಾಗಿ ಜನರನ್ನು ಯಾಮಾರಿಸಲು ನನಗೂ ನಿನಗೂ ಎಲ್ಲರಿಗೂ ಗ್ಯಾರಂಟಿ ಎಂದು ಕಾಂಗ್ರೆಸ್ ನಾಯಕರು ಅಬ್ಬರಿಸಿದರು ಎಂದು ತಿವಿದರು.
ಗ್ಯಾರಂಟಿಗಳ ಅನುಷ್ಠಾನ ಸಂಬಂಧ ಮುಖ್ಯಮಂತ್ರಿಗಳ ಸಭೆ ನಡೆಸಿದ್ದಾರೆ. ಆರ್ಥಿಕ ಹೊರೆ ಹೆಚ್ಚಲಿದೆ, ಕೆಲವೊಂದು ಅಭಿವೃದ್ಧಿ ಕೆಲಸ ನಿಲ್ಲಿಸಬೇಕಾಗುತ್ತದೆ ಎಂಬ ಆತಂಕ ಸಭೆಯಲ್ಲಿ ವ್ಯಕ್ತವಾದ ಮಾಹಿತಿಯಿದೆ.
ಇದನ್ನೂ ಓದಿ:ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್
ಕರಾರು, ಇತಿಮಿತಿ, ಮಾನದಂಡ ವಿಧಿಸುವ ಮಾತುಗಳು ಕೇಳಿಬರುತ್ತಿವೆ. ಇವೆಲ್ಲವುಗಳ ಒಟ್ಟು ಫಲಶೃತಿಯೆಂದರೆ ಕಾಂಗ್ರೆಸ್ ಪಕ್ಷ ಜನರಿಗೆ ಕೊಟ್ಟ ಮಾತಿನಂತೆ ನಡೆಯುವುದು ಅನುಮಾನ. ಜೂ.1ರಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದಿದ್ದಾರೆ, ಅನುಷ್ಠಾನದ ಸ್ವರೂಪ ಹೇಗಿರುತ್ತದೆ ಕಾದು ನೋಡೋಣ. ಜನ ಸಮುದಾಯವೇ ಸೂಕ್ತ ಉತ್ತರ ನೀಡಲಿದೆ ಎಂದರು.
ರಾಷ್ಟ್ರೀಯ ಹೊಸ ಶಿಕ್ಷಣ ನೀತಿ ಉನ್ನತ ಶಿಕ್ಷಣದಲ್ಲಿ ಜಾರಿಯಾಗಿ ಒಂದು ಸೆಮಿಸ್ಟರ್ ಮುಗಿದಿದೆ. ಪ್ರಾಥಮಿಕ ಹಂತದಲ್ಲಿ ಜಾರಿಗೆ ಸಿದ್ಧತೆಗಳಾಗಿವೆ. ಮಕ್ಕಳ ಶಿಕ್ಷಣ, ಭವಿಷ್ಯದ ದೃಷ್ಟಿಯಿಂದ ಮುಂದಿಟ್ಟ ಹೆಜ್ಜೆ ಹಿಂದಿಡಲಾಗದು. ರಾಜ್ಯ ಸರ್ಕಾರದ ನಡೆಯನ್ನು ಜನ ಸಮುದಾಯ ಸೂಕ್ಷ್ಮವಾಗಿ ಅವಲೋಕಿಸುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ‌ ಹೇಳಿದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:12 + fourteen =
Remember me
