ಬೆಂಗಳೂರು:ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯಿದ್ದರೆ ಪರಿಶಿಷ್ಟ ಜಾತಿ ಮೀಸಲು ವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ತಕ್ಷಣವೇ ಅನುಷ್ಠಾನಕ್ಕೆ ತರಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ನೇರ ಸವಾಲು ಹಾಕಿದರು.
ಬೆಂಗಳೂರಿನ ಆರ್. ಟಿ. ನಗರ ನಿವಾಸದ ಬಳಿ ಎಸ್ ಸಿ ಸಮುದಾಯದ ಮುಖಂಡರು ತಮಗೆ ನೀಡಿದ ಸನ್ಮಾನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಶಿಕ್ಷಣ, ಉದ್ಯೋಗದಲ್ಲಿ ತುಳಿತಕ್ಕೆ ಒಳಗಾದವರಿಗೆ ಅವಕಾಶ ನೀಡಿದರೆ, ತಳಸಮುದಾಯ ಸ್ವಾಭಿಮಾನ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯ. ಜತೆಗೆ ಸಮುದಾಯದಲ್ಲಿರುವ ಪ್ರತಿಭೆಗಳು ಮೇಲೆದ್ದು ಬರಲಿವೆ. ಸಂಪೂರ್ಣ ಭಾರತದ ಅಭಿವೃದ್ಧಿ ಸಾಕಾರವಾಗಲಿದೆ ಎಂದರು.
ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಸಂವಿಧಾನದ ಅನುಚ್ಛೇದ 341ರಡಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲು ವರ್ಗೀಕರಣದ ತತ್ವವನ್ನೂ ಸೇರಿಸಿದ್ದರು. ಮತ್ತೆ ಸಂವಿಧಾನಕ್ಕೆ ತಿದ್ದುಪಡಿ ತರುವ ಅಗತ್ಯವಿಲ್ಲವೆಂಬ ಚಿಂತನೆ ಅನುಸಾರ ನನ್ನ ನೇತೃತ್ವದ ಬಿಜೆಪಿ ಸರ್ಕಾರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಎಸ್ ಸಿ ಮೀಸಲು ವರ್ಗೀಕರಣಕ್ಕೆ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಇದೀಗ ಸುಪ್ರೀಂ ಕೋರ್ಟ್ ನ ಏಳು ಸದಸ್ಯರ ಪೀಠ 6:1 ಬಹುಮತದ ಮೇಲೆ ಎಸ್ ಸಿ ಒಳ ಮೀಸಲು ಕಲ್ಪಿಸುವ ರಾಜ್ಯಗಳ ಅಧಿಕಾರ ಎತ್ತಿ ಹಿಡಿದಿದೆ. ಚುನಾವಣೆ ಸಮೀಪ ಇರುವಾಗ ಬೊಮ್ಮಾಯಿ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂದು ಕಾಂಗ್ರೆಸ್ ನವರು ಟೀಕಿಸಿದ್ದರು.
ಸುಪ್ರೀಂ ಕೋರ್ಟ್ ಆದೇಶವು ನನ್ನ ನೇತೃತ್ವದ ಬಿಜೆಪಿ ಸರ್ಕಾರದ ನಿರ್ಣಯವನ್ನು ಪುರಸ್ಕರಿಸಿದೆ. ಎಸ್ ಸಿಗೆ ಒಳ ಮೀಸಲು ಕಲ್ಪಿಸುವುದಾಗಿ ಭರವಸೆ ನೀಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಆದರೆ ಭರವಸೆ ಈಡೇರಿಸುವ ಬದಲು ಸಂವಿಧಾನದ ವಿಧಿ 341ಕ್ಕೆ ತಿದ್ದುಪಡಿ ಮಾಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿ ಶೋಷಿತ ಸಮುದಾಯಗಳ ಮೂಗಿಗೆ ತುಪ್ಪ ಸವರಿತು ಎಂದು ಬೊಮ್ಮಾಯಿ ಟೀಕಿಸಿದರು.
ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡಿದರೆ ಸಾಲದು. ಅದರಂತೆಯೇ ನಡೆದುಕೊಳ್ಳಬೇಕು. ನೆರೆಯ ತೆಲಂಗಾಣ ಸರ್ಕಾರ ಸುಪ್ರೀಂ ಕೋರ್ಟ್  ಆದೇಶವನ್ನು ತಕ್ಷಣ ಜಾರಿಗೆ ತರುವುದಾಗಿ ಘೋಷಿಸಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತೆ ಕುಂಟು ನೆಪವೊಡ್ಡಿ ಕಾಲಹರಣ ಮಾಡದೆ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದರು.
ಮೀಸಲು ವರ್ಗೀಕರಣಕ್ಕಾಗಿ ಅವಿಭಜಿತ ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಮೂರು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಈ ಹೋರಾಟದಲ್ಲಿ 10 ಜನರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಸ್ಪಷ್ಟ ಆದೇಶ ನೀಡಿದ್ದು, ಕಾಂಗ್ರೆಸ್ ನ ಕಣ್ಣೊರೆಸುವ ತಂತ್ರ ಇನ್ನು ಮುಂದೆ ನಡೆಯುವುದಿಲ್ಲ ಎಂದು ಬೊಮ್ಮಾಯಿ ಎಚ್ಚರಿಸಿದರು.
ಎಸ್ಸಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ಕುರಿತು ಸುಪ್ರೀಂ ಕೋರ್ಟ್ ಇತ್ತೀಚೆಗೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಸ್ಸಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದ ಕಾರಣ ಬೊಮ್ಮಾಯಿ ಅವರಿಗೆ ಸಮುದಾಯದವರು ಸನ್ಮಾನಿಸಿ ಸಂತಸ ವ್ಯಕ್ತಪಡಿಸಿದರು.
ಸಂಸದ ಗೋವಿಂದ ಕಾರಜೋಳ  ಮತ್ತು ಮಾದರ ಚನ್ನಯ್ಯ ಗುರು ಪೀಠದ ಪೀಠಾಧ್ಯಕ್ಷರಾದ  ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ನೇತೃತ್ವದಲ್ಲಿ ಎಸ್ಸಿ ಸಮುದಾಯದ ಮುಖಂಡರು ಬೊಮ್ಮಾಯಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ ಹಾಗೂ ಎಸ್ಸಿ ಸಮುದಾಯದ ಮುಖಂಡರು ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 10 =
Remember me
