ಹುಬ್ಬಳ್ಳಿ :ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಇದು ಜವಾಬ್ದಾರಿ ಇಲ್ಲದ , ಸಹಾಯಕವಲ್ಲದ ಸರ್ಕಾರವಾಗಿದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿ ನಿವಾಸದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ಸೂನ್ ತಡವಾಗಿ ಬಿತ್ತನೆ ತಡವಾಗಿ ಆಗುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತಿದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ ಸೂಚನೆ ಸಹ ಬರುತ್ತಿವೆ. ಹೀಗಿದ್ದರೂ ಸಿಎಂ ಸಿದ್ದರಾಮಯ್ಯ ಅವರು ಇವುಗಳನ್ನು ನಿಭಾಯಿಸಲು ಯಾವುದೇ ರೀತಿ ಸನ್ನದ್ಧವಾಗಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ರಾಜ್ಯದಲ್ಲಿರುವ ಡ್ಯಾಂಗಳ ನೀರು ಅತ್ಯಂತ ಕೆಳಮಟ್ಟದಲ್ಲಿದೆ. ಇಷ್ಟು ಬೇಗ ಬರಗಾಲ ಅಂತ ಹೇಳಲ್ಲ. ಹೀಗಾಗಿ ಸರ್ಕಾರ ಸಮರ್ಪಕವಾಗಿ ಪ್ಲಾನ್ ಮಾಡಬೇಕು. ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಆ ಟಾಸ್ಕ್ ಫೋರ್ಸ್​​​ನಲ್ಲಿರಬೇಕು ಅವರಿಂದ ಸಹಕಾರ ಪಡೆಯಬೇಕು. ಈ ಕೂಡಲೇ ನೂರು ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕು. ಎನ್ ಡಿ ಆರ್ ಎಫ್ ತಂಡಗಳನ್ನು ಚುರುಕುಗೊಳಿಸಿ ಸ್ಥಳೀಯ ಮಟ್ಟದಲ್ಲಿ ಬಿಗಿ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಇದನ್ನೂ ಓದಿ:ಹಳಿ ಮೇಲೆ ಬಿದ್ದ ಬಂಡೆ; ಬೀದರ್​-ಕಲಬುರ್ಗಿ ನಡುವೆ 2 ಘಂಟೆ ರೈಲು ಸಂಚಾರ ಸ್ಥಗಿತ
ಇದು ಜವಾಬ್ದಾರಿ ಇಲ್ಲದ, ಸಹಾಯಕವಲ್ಲದ ಸರ್ಕಾರವಾಗಿದೆ. ನಗರ ಪ್ರದೇಶಗಳಲ್ಲಿಯೂ ಸಹ ಕುಡಿಯುವ ನೀರಿನ ಸಮಸ್ಯೆಯಿದೆ. ಗ್ಯಾರಂಟಿ ಬಗ್ಗೆ ಕಾದುನೋಡುವ ತಂತ್ರ ನಮ್ಮದು. ಉಚಿತ ಬಸ್ ಪಾಸ್ ಆರಂಭದ ಶೂರತ್ವವನ್ನು ಸರ್ಕಾರ ತೋರುತ್ತಿದೆ. ಗ್ಯಾರಂಟಿ ರೂಪದಲ್ಲಿ ತಾಯಿಯಂದ್ರಿಗೆ ಉಚಿತ ನೀಡುವ ಸಲುವಾಗಿ ಅವರಿಗೆ ಪ್ರಯಾಣ ಇಲ್ಲದಂತೆ ಆಗುತ್ತಿದೆ. ರಾಜ್ಯದಲ್ಲಿ ಬಸ್ ಗಳ ಸಮಸ್ಯೆ ಆಗುತ್ತಿದೆ ಎಂದಿದ್ದಾರೆ.
ಈಗಾಗಲೇ ನಾವು ಡೀಸೆಲ್‌ ಅನುದಾನ ಬಿಡುಗಡೆ ಮಾಡಿದೀವಿ ಅದನ್ನು ಮುಂದುವರಿಕೆ ಮಾಡಬೇಕು. ಕೆಎಸ್ ಆರ್ ಟಿಸಿ ಸಾಕಷ್ಟು ಡೀಸೆಲ್‌ ಬಳಕೆ ಮಾಡಬೇಕು. ಗ್ಯಾರಂಟಿಗಳಿಗೆ ಹಣಕಾಸಿನ ಬಗ್ಗೆ ಸರ್ಕಾರ‌ ಸ್ಪಷ್ಟವಾಗಿ ಹೇಳುತ್ತಿಲ್ಲ. ಹಣಕಾಸಿನ ವಿಚಾರದಲ್ಲಿ ಜನರನ್ನು ಕತ್ತಲಲ್ಲಿ ಇಡಲು ಸರ್ಕಾರ ಮುಂದಾಗಿದೆ. ಗ್ಯಾರಂಟಿ ವಿಚಾರದಲ್ಲಿ ಹಣಕಾಸಿನ ಬಗ್ಗೆ ಮಾಹಿತಿ ಪಡೆಯುವುದು ಪ್ರತಿಯೊಂದು ಕನ್ನಡಿಗನ ಹಕ್ಕು. ಇದು ಒಂದು ಕೈಯಲ್ಲಿ ತೆಗೆದುಕೊಂಡು ಮತ್ತೊಂದು ಕೈಯಲ್ಲಿ ಕೂಡುವಂತಾಗಿದೆ ಎಮದು ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಹನುಮಂತನಿಗೆ ಮೀಸಲಿಡುವ ಖಾಲಿ ಸೀಟಿನ ಪಕ್ಕದ ಸೀಟಿಗೆ ದುಬಾರಿ ಬೆಲೆಯಂತೆ! ಆದಿಪುರುಷ್​ ಚಿತ್ರತಂಡ ಹೇಳಿದ್ದಿಷ್ಟು…
ನಾವು ವಿದ್ಯುತ್ ಬಿಲ್ ಏರಿಕೆ ಅನುಷ್ಠಾನ ತಂದಿಲ್ಲ. ವಿದ್ಯುತ್ ಬಿಲ್ ದರ ಏರಿಕೆ ನಮ್ಮ ಸರ್ಕಾರ‌ ಮಾಡಿಲ್ಲ. ದರ ಏರಿಕೆ ವರದಿಯನ್ನು ನಾವು ಒಪ್ಪಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ಬಿಲ್ ದರ ಏರಿಕೆಯ ವರದಿಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ಬಿಲ್ ಜಾಸ್ತಿ ಆಗಿದೆ. ರಾಜ್ಯ ಸರ್ಕಾರದ ನಡೆ ವಿರುದ್ಧ ಮಾಜಿ‌ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ ಹೊರಹಾಕಿದ್ದಾರೆ.
ಬಾಲಾಸೋರ್​ ರೈಲು ದುರಂತ; ಲಾಟರಿಯಲ್ಲಿ ಗೆದ್ದ ಹಣದಲ್ಲಿ ಸಂತ್ರಸ್ತರಿಗೆ ಪಾಲು ನೀಡಿದ ಒಡಿಶಾ ನಿವಾಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
