ಬೆಂಗಳೂರು:ಕರ್ನಾಟಕದ ಮುಖ್ಯಮಂತ್ರಿ ಪದವಿಯಿಂದ ಈಗಷ್ಟೇ ವಿಶ್ರಾಂತಿ ಪಡೆದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಇಂದು ತಮ್ಮ ಮನೆಯ ಆವರಣದಲ್ಲೇ ರಾಷ್ಟ್ರಧ್ವಜ ಹಾರಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದರು. ಈ ಚಿತ್ರವನ್ನು ಬಿಎಸ್​ವೈ ತಮ್ಮ ಟ್ವಿಟರ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಯಡಿಯೂರಪ್ಪ ಅವರಿಗೆ ಟ್ವಿಟರ್​ನಲ್ಲಿ ಒಂದು ಮಿಲಿಯನ್​ ಫಾಲೋವರ್ಸ್​​ ಇದ್ದಾರೆ.
“ನಾಡಿನ ಸಮಸ್ತ ಜನತೆಗೆ 75ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ, ನಮಗೆ ಯಾವುದೇ ಸವಾಲನ್ನು ಎದುರಿಸಲು ಪ್ರೇರಣೆ ನೀಡುವ ಜೊತೆಗೆ ಭವ್ಯ ರಾಷ್ಟ್ರನಿರ್ಮಾಣದ ಕರ್ತವ್ಯಗಳನ್ನೂ ನೆನಪಿಸುತ್ತದೆ. ಬನ್ನಿ, ನಾವೆಲ್ಲರೂ ಒಂದಾಗಿ ಸಮೃದ್ಧ, ಸಶಕ್ತ, ಶ್ರೇಷ್ಠ ಭಾರತಕ್ಕಾಗಿ ಒಂದಾಗಿ ಮುನ್ನಡೆಯೋಣ. ಜೈ ಹಿಂದ್!” ಎಂದು ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ.
ಸೈನಿಕ ಶಾಲೆಗಳಲ್ಲಿ ಇನ್ನು ಮುಂದೆ ಹೆಣ್ಣುಮಕ್ಕಳಿಗೂ ಪ್ರವೇಶಾವಕಾಶ

ಸ್ವಾತಂತ್ರ್ಯದ ಶತಮಾನೋತ್ಸವ ವೇಳೆಗೆ ಯಾವ ದೇಶಕ್ಕೂ ನಾವು ಕಡಿಮೆಯಿಲ್ಲ ಎನ್ನುವಂತೆ ಬೆಳೆದಿರಬೇಕು: ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 10 =
Remember me
