ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗವಷ್ಟೇ ರಾಷ್ಟ್ರ ರಾಜಧಾನಿ ದೆಹಲಿಯಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಮರಳಿದ್ದಾರೆ. ನಗರಕ್ಕೆ ಮರಳುತ್ತಿದ್ದಂತೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು ದೆಹಲಿಯಲ್ಲಿನ ಮಾತುಕತೆ ಕುರಿತು ಮಾಹಿತಿ ನೀಡಿದರು.
ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ದೆಹಲಿ ಭೇಟಿಯಲ್ಲಿ ವಿಶೇಷವೇನೂ ನಡೆದಿಲ್ಲ ಎಂಬ ಸಂಗತಿಯನ್ನು ಸುದ್ದಿಗಾರರ ಜತೆ ಹಂಚಿಕೊಂಡರು. ನಾಲ್ಕು ರಾಜ್ಯಗಳ ಚುನಾವಣಾ ಸಮಿತಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಹೋಗಿದ್ದೆ ಎಂದೂ ತಿಳಿಸಿದರು.
ಇದನ್ನೂ ಓದಿ:ನಾನು ಹೋದಾಗ ನೀವು ನನ್ನನ್ನು ಮಿಸ್ ಮಾಡ್ಕೊಳ್ತೀರಿ: ಶಿವರಾಜ್ ಸಿಂಗ್ ಚೌಹಾಣ್​
ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ‌ದ ಬಗ್ಗೆ ದೆಹಲಿಯಲ್ಲಿ ಯಾವುದೇ ಪ್ರಸ್ತಾಪ ನಡೆದಿಲ್ಲ. ಯಾವಾಗ ರಾಜ್ಯಾಧ್ಯಕ್ಷರ ಆಯ್ಕೆ ಮಾಡುತ್ತಾರೆ ಅಂತ ನನಗೆ ಮಾಹಿತಿ ಇಲ್ಲ ಎಂದ ಅವರು, ವಿಜಯೇಂದ್ರ ಆಯ್ಕೆ ಕುರಿತ ಪ್ರಶ್ನೆಗೆ ಗೊತ್ತಿಲ್ಲ ಎಂದಷ್ಟೇ ಪ್ರತಿಕ್ರಿಯೆ ನೀಡಿದರು.
ಶಿವಮೊಗ್ಗದಲ್ಲಿನ ಗಲಭೆ ಕುರಿತಂತೆಯೂ ಪ್ರತಿಕ್ರಿಯೆ ನೀಡಿದ ಅವರು, ಶಿವಮೊಗ್ಗದಲ್ಲಿ ಇಂತಹ ಗಲಾಟೆ ನಡೆಯಬಾರದಿತ್ತು. ಹಿಂದೆಂದೂ ರೀತಿ ನಡೆದಿಲ್ಲ, ಇದೀಗ ನಡೆದಿರುವುದು ದುರದೃಷ್ಟಕರ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಬಳಿಕ ಮಾತನಾಡುವುದಾಗಿ ಹೇಳಿ ತೆರಳಿದರು.
ಸೂಪರ್​ ಮಾರ್ಕೆಟ್​ನಲ್ಲಿ ಫ್ರಿಡ್ಜ್ ಡೋರ್ ತೆರೆಯುತ್ತಿದ್ದಂತೆ ಶಾಕ್​; ನಾಲ್ಕು ವರ್ಷದ ಬಾಲಕಿ ಸಾವು

ಪಂಚಾಯಿತಿಗೊಂದು ಮದ್ಯದಂಗಡಿ ತೆರೆಯಲು ಸರ್ಕಾರದ ಚಿಂತನೆ: ಇದನ್ನು ವಿರೋಧಿಸಿ ನೂರಾರು ಮಹಿಳೆಯರ ಅಹೋರಾತ್ರಿ ಪ್ರತಿಭಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 11 =
Remember me
