ಬೆಂಗಳೂರು:ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಟ್ವೀಟ್​​ ಮೂಲಕ ಸರ್ಕಾರವನ್ನು ಒತ್ತಾಯಿಸಿರುವ ಮಾಜಿ ಸಿಎಂ ಎಚ್​ಡಿಕೆ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕೆಂದು ಹೇಳಿದ್ದಾರೆ.
ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು.1/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)August 12, 2020

ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂಪುಷ್ಟಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಎಚ್​ಡಿಕೆ ಹೇಳಿದ್ದಾರೆ.
ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂಪುಷ್ಟಿ ನೀಡಿದೆ.ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ.ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ.6/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)August 12, 2020

ಬಸವಣ್ಣನವರ ವಚನದಯವಿಲ್ಲದ ಧರ್ಮವಾವುದಯ್ಯಾ?ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂದಯವೇ ಧರ್ಮದ ಮೂಲವಯ್ಯಾಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾಈ ಮೇಲಿನ ಬಸವಣ್ಣನವರ ವಚನವನ್ನು ಟ್ವೀಟ್​ ಮಾಡಿರುವ ಎಚ್​ಡಿಕೆ ಗಲಭೆಯನ್ನು ಖಂಡಿಸಿದ್ದಾರೆ.
ದಯವಿಲ್ಲದ ಧರ್ಮವಾವುದಯ್ಯಾ?ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂದಯವೇ ಧರ್ಮದ ಮೂಲವಯ್ಯಾಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ
8/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)August 12, 2020

ಕರಾನ್​ ನೀತಿ ಬೋಧನೆ“ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ.” ಎಂಬ ಕುರಾನ್​ನಲ್ಲಿ ಬರುವ ಸಂದೇಶದ ಸಾಲನ್ನು ಟ್ವೀಟ್​ ಮೂಲಕ ನೆನಪಿಸಿರುವ ಎಚ್​ಡಿಕೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
"ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ."ಕುರಾನ್ ಆಲ್ ಹಿಜ್ರ್ 15
7/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)August 12, 2020

ಡಿಜೆ ಹಳ್ಳಿ ಗಲಭೆ ಹಿಂದಿದೆ ಮಾಜಿ ಸಚಿವರೊಬ್ಬರ ಕೈವಾಡ; ನಳೀನ್​ ಕುಮಾರ್​ ಕಟೀಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 4 =
Remember me
