ಬೆಂಗಳೂರು:ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷದ ಜಾತ್ಯಾತೀತತೆಯನ್ನು ಪ್ರಶ್ನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.
ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ. ‘ಜಾತ್ಯತೀತ’ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ, ಕುಕ್ಕರ್, ಇಸ್ತ್ರಿ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯರವರೇ ಎಂದು ಎಚ್​ಡಿಕೆ ಪ್ರಶ್ನೆ ಮಾಡಿದ್ದಾರೆ.
ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್’ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್​ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ?
ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ.. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ?
ಇದನ್ನೂ ಓದಿ:ಮಂಗಳೂರು ಮೀನುಗಾರರ ಬಲೆಗೆ ಬಿದ್ದ 300 ಕೆಜಿ ತೂಕದ ಮುರು! ಮಾರಾಟವಾದ ಬೆಲೆ ಕೇಳಿದ್ರೆ ಬೆರಗಾಗ್ತೀರಾ
2006ರಲ್ಲಿ ಬಿಜೆಪಿ ಜತೆ ಸರ್ಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್​ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ! ಮರೆತಿರಾ ಛದ್ಮವೇಷಧಾರಿ? ಪಾಪ, ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು, ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು.
ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ.
‘ ಜಾತ್ಯತೀತ ‘ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ…pic.twitter.com/MeyrSH2mHa
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)September 30, 2023

ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಎಚ್​.ಡಿ. ದೇವೇಗೌಡ ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ?
ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ? ಜೆಡಿಎಸ್​ನವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ. ಮೈತ್ರಿಯಿಂದ ಜೆಡಿಎಸ್ ಕೋಮುವಾದಿಯಾಗುತ್ತದಾ? ಅಥವಾ ಬಿಜೆಪಿ ಜಾತ್ಯತೀತ ಸಿದ್ಧಾಂತ ಅನುಸರಿಸುತ್ತದಾ? ಎಂಬುದನ್ನು ಕುಮಾರಸ್ವಾಮಿ ರಾಜ್ಯದ ಜನತೆಗೆ ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು.
ಮಂಗಳೂರು ಮೀನುಗಾರರ ಬಲೆಗೆ ಬಿದ್ದ 300 ಕೆಜಿ ತೂಕದ ಮುರು! ಮಾರಾಟವಾದ ಬೆಲೆ ಕೇಳಿದ್ರೆ ಬೆರಗಾಗ್ತೀರಾ

ಅರೆಬರೆ ಬಟ್ಟೆ ಧರಿಸಿ ಸಂಯುಕ್ತಾ ಬೋಲ್ಡ್​ ಡಾನ್ಸ್​​: ನೆಟ್ಟಿಗರ ಆಕ್ರೋಶ, ತಿರುಗೇಟು ಕೊಟ್ಟ ಡಾನ್ಸರ್​ ಕಿಶನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 15 =
Remember me
