ಬೆಂಗಳೂರು:ಕೃಷಿ ಇಲಾಖೆಯಲ್ಲಿ ವರ್ಗಾವಣೆ ಮಾಡಲು ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಬರೆದಿರುವ ದೂರಿನ ಪತ್ರವು ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಇದು ನಕಲಿ ಪತ್ರ ಎಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್​ ಪ್ರತಿಪಾದಿಸುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರು ಟ್ವೀಟ್​ ಮೂಲಕ ಸರ್ಕಾರ ವಿರುದ್ಧ ಗುಡುಗಿದ್ದಾರೆ.
ಸರಣಿ ಟ್ವೀಟ್​ ಮಾಡಿರುವ ಎಚ್​ಡಿಕೆ, ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ.
ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ 'ಸಿದ್ದಕಲೆ' ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ. 1/5#YstTax#CashForPosting
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)August 8, 2023

ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯವು ನಕಲಿ ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ.
ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು. ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್​ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ?
ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್​ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?? ಎಂದು ಎಚ್​ಡಿಕೆ ಟೀಕಾ ಪ್ರಹಾರ ನಡೆಸಿದ್ದಾರೆ.
ಹರ ಹರ ಶಂಭು ಹಾಡನ್ನು ಹಾಡಿ ಜನಮನ ಗೆದ್ದಿರುವ ಗಾಯಕಿ ಫರ್ಮಾನಿ ನಾಜ್​ ಸಹೋದರನ ಬರ್ಬರ ಹತ್ಯೆ!

ಸಮಷ್ಠಿ ಹಿತ ಮುಖ್ಯ: ಮನೋಲ್ಲಾಸ

ಟ್ರಕ್​ ಹಿಂದೆ ನಿಂತಿದ್ದ ಕಾರಿಗೆ ಮತ್ತೊಂದು ಟ್ರಕ್ ಡಿಕ್ಕಿ​: ದೇವಸ್ಥಾನದಿಂದ ಮರಳುತ್ತಿದ್ದ ಯುವತಿ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 14 =
Remember me
