ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್​ ಬಗ್ಗೆ ಸಾರ್ವಜನಿಕರಿಗೆ ಸತ್ಯ ತಿಳಿಸಬೇಕು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರಿನಲ್ಲಿ ಇತ್ತೀಚೆಗೆ ಶಾಂತಿ ಕದಡಿದೆ. ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಗಲಭೆಯಿಂದ ಸಮುದಾಯಗಳ ನಡುವೆ ಬಿರುಕು ಮೂಡಿದೆ. ಈಗ ಪತ್ತೆಯಾಗಿರುವ ಸಜೀವ ಬಾಂಬ್​ ಇನ್ನಷ್ಟು ಭೀತಿಗೆ ಕಾರಣವಾಗಿದೆ. ಹೀಗಾಗಿ ಬಾಂಬ್​ ಬಗ್ಗೆ ಸರ್ಕಾರ ಜನರಿಗೆ ಸತ್ಯದ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.
ಬಾಂಬ್​ ಬಗ್ಗೆ ಕಟ್ಟುಕತೆಗಳು ಹುಟ್ಟಿಕೊಂಡಿವೆ. ಇದಕ್ಕೆ ತೆರೆ ಎಳೆಯಲು ಸರ್ಕಾರ ಸತ್ಯ ಹೇಳಬೇಕು. ಪಟಾಕಿ ಮದ್ದಿಗೆ ತುಂಡಾದ ವೈರುಗಳನ್ನು ಜೋಡಿಸಲಾಗಿದೆ ಎಂಬ ಅನುಮಾನ ಕಾಡುತ್ತಿದೆ. ಹೀಗಾಗಿ ತನಿಖೆ ನಡೆಸಿ ನಿಜ ಹೇಳಬೇಕೆಂದರು.
ನಾನು ಸಿಎಂ ಆಗಿದ್ದಾಗ ರಾಮನಗರಲ್ಲಿ ಬಾಂಬ್​ ಪತ್ತೆ ಎಂದು ವರದಿ ಮಾಡಲಾಗಿತ್ತು. ಆದರೆ ಪರಿಶೀಲನೆ ನಡೆಸಿದಾಗ ಆನೆ ಪಟಾಕಿ ಎಂದು ತಿಳಿದು ಬಂತು. ಸರ್ಕಾರ ತನಿಖೆ ನಡೆಸಿ ಜನರ ಮುಂದೆ ನಿಜ ಹೇಳಬೇಕು ಎಂದು ಅವರು ಆಗ್ರಹಿಸಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 + seven =
Remember me
