ಬೆಂಗಳೂರು:ಸಚಿವ ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಈ ಕೂಡಲೇ ರಾಜೀನಾಮೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಕಾಂಗ್ರೆಸ್ ಜನಧ್ವನಿ ಜಾಥಾಗೆ ಚಾಲನೆ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ, ಈ ಕಾಮಕಾಂಡ ಇಡೀ ರಾಷ್ಟ್ರಕ್ಕೆ ಗೊತ್ತಾಗಿದೆ. ಮಾನ-ಮರ್ಯಾದೆ ಇರೋ ಸರ್ಕಾರ ಕೂಡಲೇ ರಾಜೀನಾಮೆ ತೆಗೆದುಕೊಂಡು ಎಫ್​ಐಆರ್​ ದಾಖಲಿಸಬೇಕು. ಮನುಷ್ಯನ ಮೌಲ್ಯಗಳಿಗೆ ಬೆಲೆ ಕೊಡುವುದಾದರೆ ಕೂಡಲೇ ರಾಜೀನಾಮೆ ತೆಗೆದುಕೊಳ್ಳಬೇಕೆಂದರು.
ಇದನ್ನೂ ಓದಿರಿ:ರಾಸಲೀಲೆ ವಿಡಿಯೋ ಬಹಿರಂಗ: ಸಚಿವ ರಮೇಶ್ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಾಭಿಪ್ರಾಯ ರೂಪಿಸಲು ಪ್ರದೇಶ ಕಾಂಗ್ರೆಸ್ ಸಮಿತಿ ಜನಧ್ವನಿ ಜಾಥಾ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಎಸ್.ಆರ್. ಪಾಟೀಲ್ ಮತ್ತಿತರ ನಾಯಕರು ಭಾಗವಹಿಸಿದರು.(ದಿಗ್ವಿಜಯ ನ್ಯೂಸ್​)
ಸಂತ್ರಸ್ತೆ ಯಾರೆಂದು ಗೊತ್ತಾಗಬೇಕು: ಎಚ್​.ವೈ. ಮೇಟಿ ಪ್ರಕರಣ ಎಳೆದುತಂದ ಬಾಲಚಂದ್ರ ಜಾರಕಿಹೊಳಿ!

ದೆಹಲಿಗೆ ಹೋಗ್ತೇನೆಂದು ಹೊರಟ ಸಚಿವ ರಮೇಶ್​ ಜಾರಕಿಹೊಳಿ ರಾತ್ರೋರಾತ್ರಿ ಹೋಗಿದ್ದು ಎಲ್ಲಿಗೆ..?

ಸಿಡಿ ಸುಳಿಯಲ್ಲಿ ಸಾಹುಕಾರ: ರಮೇಶ್​ ಜಾರಕಿಹೊಳಿ ಮಾತಿನಿಂದ ಅಡಕತ್ತರಿಯಲ್ಲಿ ಸಿಲುಕಿದ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 4 =
Remember me
