ಬೆಂಗಳೂರು:ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಅಥವಾ ಭಾರತೀಯ ಜನತಾ ಪಕ್ಷವೋ? ಎಂದು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ.
ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳ ವಿವರ ಸಲ್ಲಿಸುವಂತೆ ಬಿಜೆಪಿ ಬಿಡುಗಡೆ ಮಾಡಿರುವ ಪತ್ರವನ್ನು ಟ್ವಿಟರ್​ನಲ್ಲಿ ಟ್ಯಾಗ್​ ಮಾಡಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ:ನನ್ನನ್ನು ಸೋಲಿಸಬೇಕೆಂದೇ ಬಿಜೆಪಿ-ಕಾಂಗ್ರೆಸ್​ ಒಂದಾಗಿದೆ: ನಿಖಿಲ್​ ಕುಮಾರಸ್ವಾಮಿ
ಪಕ್ಷದ ಪದಾಧಿಕಾರಿಗಳು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನು ನಿರ್ಧಾರ ಮಾಡ್ತಾರಾ? ತಮ್ಮ ಪಕ್ಷದ ಪರವಾಗಿಲ್ಲದ ಮತದಾರರು ಇರುವ ಮತಗಟ್ಟೆಗಳಲ್ಲಿ‌, ಭದ್ರತೆಯ ನೆಪದಲ್ಲಿ ಕೇಂದ್ರ ಸೇನಾಪಡೆಗಳನ್ನು ನಿಯೋಜಿಸಲಾಗುತ್ತಿದ್ದು, ಮತದಾರರನ್ನು ಬೆದರಿಸಿ, ಮತದಾನ ಮಾಡದಂತೆ ತಡೆಯುವುದು ಈ ಪತ್ರದ ದುರುದ್ದೇಶವಾಗಿದೆ ಎಂದು ಟೀಕಿಸಿದ್ದಾರೆ.
ಚುನಾವಣಾ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮತ್ತು ವಿಡಿಯೋ ರೆಕಾರ್ಡಿಂಗ್ ಮಾಡುವ ಹೊಣೆ ಚುನಾವಣಾ ಆಯೋಗದಲ್ಲವೇ? ಇದನ್ನು ನಡೆಸಲು ರಾಜಕೀಯ ಪಕ್ಷಕ್ಕೆ ಅನುಮತಿ ಕೊಟ್ಟವರು ಯಾರು? ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಈ ಪತ್ರ ಬರೆದಿರುವುದನ್ನು ನೋಡಿದರೆ ಕೇಂದ್ರ ಸರ್ಕಾರವೇ ಈ ಅಕ್ರಮ ಚಟುವಟಿಕೆಯಲ್ಲಿ ಶಾಮೀಲಾಗಿರುವುದು ಸ್ಪಷ್ಟವಾಗಿದೆ ಎಂದು ಸಿದ್ದು ಮಾತಿನ ಚಾಟಿ ಬೀಸಿದ್ದಾರೆ.ಇದನ್ನೂ ಓದಿ:ಕೊಡಗಿನಲ್ಲಿ ಜೆಡಿಎಸ್ ಪಕ್ಷದ ಪರವಾಗಿ ಅಲ್ಪಸಂಖ್ಯಾತರ ಒಲವು
ಕೇಂದ್ರ ಚುನಾವಣಾ ಆಯುಕ್ತರು ತಕ್ಷಣ ಮಧ್ಯೆ ಪ್ರವೇಶಿಸಬೇಕು. ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ವಿಚಾರಣೆಗೊಳಪಡಿಸಿ, ಅವರು ಯಾವುದೇ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ನಿಷೇಧಿಸಬೇಕು. ಅವರ ಪಕ್ಷದ ನಾಯಕರು ಮತ್ತು ಅಭ್ಯರ್ಥಿಗಳಿಂದ ಪಡೆದಿರುವ ಮಾಹಿತಿಯನ್ನು ವಶಕ್ಕೆ ಪಡೆಯಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
Who is responsible for conducting the elections? Election commission? Or@BJP4India?
Is it the responsibility of the party representatives to decide sensitive and most sensitive booths?#AssemblyElection2023pic.twitter.com/x2AeGZfpRB
— Siddaramaiah (@siddaramaiah)April 27, 2023

ಬಿಜೆಪಿ ಪಾಲಿಗೆ ಈಶ್ವರಪ್ಪ ಅಂದು ಅರ್ಜುನ ಇಂದು ಭೀಷ್ಮ: ಅಣ್ಣಾಮಲೈ

ಶಿವಮೊಗ್ಗದಲ್ಲಿ ಚೆನ್ನಬಸಪ್ಪ ಗೆದ್ದರೇ ನಾನು ಗೆದ್ದ ಹಾಗೆ: ಕೆ.ಎಸ್​. ಈಶ್ವರಪ್ಪ

ರಕ್ತದಲ್ಲಿ ಪತ್ರ ಬರೆದು ಯಡಿಯೂರಪ್ಪಗೆ ತಿರುಗೇಟು ಕೊಟ್ಟ ಕಾಂಗ್ರೆಸ್ ಕಾರ್ಯಕರ್ತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
