ಬೆಂಗಳೂರು: ಸತತ ರಾಜಕೀಯ ಒತ್ತಡದ ನಡುವೆ ಬಿಡುವು ಮಾಡಿಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನ ವಿಶ್ರಾಂತಿಗಾಗಿ ರೆಸಾರ್ಟ್​ಗೆ ತೆರಳಿದ್ದಾರೆ.
ಬೆಂಗಳೂರಿನ ಹೊರವಲಯದ ರೆಸಾರ್ಟಲ್ಲಿ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಲು ತೆರಳಿದ್ದಾರೆ. ತಮ್ಮ ಆಪ್ತ ಸಹಾಯಕರನ್ನೂ ಬಿಟ್ಟು ತೆರಳಿರುವ ಸಿದ್ದರಾಮಯ್ಯ ಏನಾದರೂ ರಾಜಕೀಯ ತಂತ್ರ ಹೆಣದಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ.
ಮೈಸೂರು ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದ್ದಕ್ಕೆ ಮುನಿಸಿಕೊಂಡಿರುವ ಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಟಕ್ಕರ್ ಕೊಡ್ತಾರಾ ಎಂಬುದು ಸದ್ಯದ ಪ್ರಶ್ನೆಯಾಗಿದೆ. ಕೆಶಿ ಮತ್ತು ಎಚ್ಡಿಕೆ ಮೈತ್ರಿ ಪಾಲಿಟಿಕ್ಸ್ ಗೆ ಸಿದ್ದರಾಮಯ್ಯ ಬೇಸತ್ತಿದ್ದಾರೆ ಎಂದು ಹೇಳಲಾಗಿದೆ.
ನಾಳೆ ಸಂಜೆ ರೆಸಾರ್ಟ್ ಇಂದ ವಾಪಸ್ ಆಗಲಿರುವ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಮಗಳ ಮದುವೆಗೆ ದೆಹಲಿಗೆ ತೆರಳಲಿದ್ದಾರೆ. ಸುರ್ಜೇವಾಲಾ ಮೈಸೂರು ಮೇಯರ್ ಚುನಾವಣೆ ಸೇರಿದಂತೆ ಇತ್ತಿಚಿನ ಪಕ್ಷದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಲಿರುವ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಬಳಿಯೂ ಚರ್ಚೆ ನಡೆಸಲಿದ್ದಾರೆ.
ಅಧಿಕೃತವಾಗಿ ಬಿಜೆಪಿ ಸೇರಿದ ‘ಮೆಟ್ರೊ ಮ್ಯಾನ್’ ಇ ಶ್ರೀಧರನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 16 =
Remember me
