ಬೆಂಗಳೂರು:ಯಡಿಯೂರಪ್ಪ ಶಾಶ್ವತವಾಗಿ ಅಧಿಕಾರದಲ್ಲಿರುವುದಿಲ್ಲ. ನೀವು ಇರೋದು ಶಾಂತಿ ಕಾಪಾಡೋಕೆ. ಅದನ್ನ ಬಿಟ್ಟು ಬಿಜೆಪಿ ಮಾತು ಕೇಳಿ ಕಾನೂನು ದುರುಪಯೋಗ ಮಾಡಿಕೊಳ್ಳಬೇಡಿ, ಮುಂದಿನ ದಿನಗಳಲ್ಲಿ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪೊಲೀಸರನ್ನು ಎಚ್ಚರಿಸಿದ್ದಾರೆ.
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಪೊಲೀಸರು ನಿಸ್ಪಪಕ್ಷಪಾತ ಕೆಲಸ ಮಾಡುತ್ತಿಲ್ಲ, ನಮ್ಮ ಪಕ್ಷದವರನ್ನು ಗುರ್ತಿಸಿ ಕೇಸ್ ಹಾಕುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಕೈ ನಾಯಕರ ಬಂಧನ:ಪೊಲೀಸ್ ಇಲಾಖೆಯನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಶನಿವಾರ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಗೊಳಿಸಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ರಿಜ್ವಾನ್ ಅರ್ಷದ್ ಮತ್ತಿತರರು ಕಾರ್ಯಕರ್ತರೊಂದಿಗೆ ಸೇರಿ ಸಿಎಂ ಮನೆಯತ್ತ ಹೊರಟಾಗ ಪೊಲೀಸರು ವಶಕ್ಕೆ ಪಡೆದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + eight =
Remember me
