ಬೆಂಗಳೂರು:ಲೋಕಸಭಾ ಸದಸ್ಯ ಸ್ಥಾನದಿಂದ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.​
ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ, ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ. ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ:ಕಂಪನಿಗಳನ್ನ ಪ್ರಶ್ನಿಸಿ, ಬಡ ಚಾಲಕರ ಮೇಲೇಕೆ ದೌರ್ಜನ್ಯ?;ಆಟೋ ಚಾಲಕರ ವಿರುದ್ಧ ಜನರ ಕಿಡಿ
ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್​​​ಡಿಎ ಸರ್ಕಾರದ ವಿರುದ್ಧ ಮಾತನಾಡುವ ಎಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದು ಕೇವಲ ಕಾಂಗ್ರೆಸ್ ಪಕ್ಷ ಅಥವಾ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಮಾಜಿ ಸಿಎಂ ಸಿದ್ದು ಕರೆ ನೀಡಿದ್ದಾರೆ.
ರಾಹುಲ್ ಗಾಂಧಿಯವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು, ಆಕ್ರೋಶದ ಕೈಗೆ ಬುದ್ದಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ ಎಂದು ಸಿದ್ದರಾಮಯ್ಯು ಮನವಿ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ ಹೊರಟ ಪ್ರತಿಪಕ್ಷಗಳ ನಾಯಕರು ಪೊಲೀಸ್​ ವಶಕ್ಕೆ

ಹಾಲಿಗಾಗಿ ಅಂಗಡಿಗೆ ಹೋಗಬೇಕಾಗಿಲ್ಲ..ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಫ್ರೆಶ್‌ ಮಿಲ್ಕ್

ಹಣಕ್ಕಾಗಿ ಸ್ವಂತ ಸಂಬಂಧಿಕರಿಂದಲೇ ಬಾಲಕಿಯ ಅಪಹರಣ!? ಮಗಳಿಗಾಗಿ ಪಾಲಕರ ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − nineteen =
Remember me
