ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಮತ್ತೆ ಕರೊನಾ ಸೋಂಕು ತಗುಲಿದೆ. ಅನಾರೋಗ್ಯ ಕಾಣಿಸಿದ ಹಿನ್ನೆಲೆಯಲ್ಲಿ ಅವರು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್​ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ.
ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯಥಾ ಭಾವಿಸಬಾರದು. ಮೂರ್ನಾಲ್ಕು ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ ಎಂಬುದಾಗಿಯೂ ಅವರು ಮನವಿ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿಯವರು ಈ ಹಿಂದೆಯೂ ಕೋವಿಡ್ ಸೋಂಕಿಗೆ ಒಳಗಾಗಿದ್ದರು.
ಇದನ್ನೂ ಓದಿ:ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಮಾತುಕತೆ
ರಾಷ್ಟ್ರಪತಿ ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿ ಆಗಿ ಆಯ್ಕೆ ಆಗಿರುವ ದ್ರೌಪದಿ ಮುರ್ಮು ಅವರು ನಿನ್ನೆಯಷ್ಟೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರನ್ನು ಭೇಟಿಯಾಗಿದ್ದು, ರಾಷ್ಟ್ರಪತಿ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಕೋರಿಕೊಂಡಿದ್ದರು.
ಇದನ್ನೂ ಓದಿ:ದೇವೇಗೌಡರ ಮನೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ: ಬೆಂಬಲದ ಕುರಿತು ಸದ್ಯಕ್ಕಿಷ್ಟೇ ತೀರ್ಮಾನ..
ಈ ಸಂದರ್ಭದಲ್ಲಿ ದ್ರೌಪದಿ ಮುರ್ಮು ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮುಂತಾದವರೂ ದೇವೇಗೌಡರ ಮನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಎಚ್​.ಡಿ.ರೇವಣ್ಣ, ದೇವೇಗೌಡರ ಪತ್ನಿ ಚನ್ನಮ್ಮ ಮಾತ್ರವಲ್ಲದೆ ಅವರ ಕುಟುಂಬದ ಹಲವಾರು ಸದಸ್ಯರು ಉಪಸ್ಥಿತರಿದ್ದು, ಮುರ್ಮು ಮತ್ತಿತರರನ್ನು ವಿಶೇಷವಾಗಿ ಸತ್ಕರಿಸಿ ಕಳಿಸಿದ್ದರು.
ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಹೊಲಕ್ಕೆ ನುಗ್ಗಿದ ವಾಹನ, 29 ವರ್ಷದ ಇಂಜಿನಿಯರ್ ಸಾವು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
