ಬೆಂಗಳೂರು:ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ.
ಈ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ಖಚಿತಪಡಿಸಿರುವ ವೈದ್ಯಕೀಯ ಸಚಿವ ಕೆ. ಸುಧಾಕರ್​, ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.ಅವರಿಗೆ ಹೃದಯಪೂರ್ವಕ ಸ್ವಾಗತ ಎಂದಿದ್ದಾರೆ.
ಇದನ್ನೂ ಓದಿ:ಹಣ, ಶಿಫಾರಸಿದ್ದರಷ್ಟೇ ಹಾಸಿಗೆ, ಜನರ ಕೈಗೆಟುಕುತ್ತಿಲ್ಲ ಸರ್ಕಾರಿ ಆಸ್ಪತ್ರೆ
ಬಿಜಿಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಣ್ಣಾಮಲೈ ಅವರು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ. ಈ ಮೂಲಕ ರಾಜಕೀಯ ಜೀವನ ಆರಂಭಿಸಲಿದ್ದಾರೆ.
ಐಪಿಎಸ್​ ಅಧಿಕಾರಿಯಾಗಿ ಉನ್ನತ ಹುದ್ದೆಗಳನ್ನು ನಿಭಾಯಿಸಿದ್ದ ಅಣ್ಣಾಮಲೈ ಅವರು ತಮ್ಮ ದಿಟ್ಟ ತನದಿಂದಲೇ ಖಡಕ್​ ಅಧಿಕಾರಿಯೆಂಬ ಖ್ಯಾತಿಗಳಿಸಿದ್ದರು. ತಮ್ಮ ಹುದ್ದೆಗೆ ದಿಢೀರ್​ ರಾಜೀನಾಮೆ ನೀಡಿದ್ದು ಅಭಿಮಾನಿಗಳಿಗೆ ನೋವಾಗಿತ್ತು. ಇದೀಗ ರಾಜಕೀಯಕ್ಕೆ ಸೇರಿ ತಮ್ಮ ಸೇವೆಯನ್ನು ಮುಂದುವರಿಸಲಿದ್ದಾರೆ. (ದಿಗ್ವಿಜಯ ನ್ಯೂಸ್​)
ಕರ್ನಾಟಕ ಕೇಡರ್‌ನ ನಿವೃತ್ತಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ.ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.ಅವರಿಗೆ ಹೃದಯಪೂರ್ವಕ ಸ್ವಾಗತ.pic.twitter.com/iDqL3SEoaf
— Dr Sudhakar K (@mla_sudhakar)August 25, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 6 =
Remember me
