ಬೆಂಗಳೂರು:ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದು ತಮ್ಮದೇ ಪಕ್ಷದ ನಾಯಕರ ವಿರುದ್ಧ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಟೀಕಾ ಪ್ರಹಾರ ಮಾಡಿದ್ದಾರೆ.
ತಮ್ಮ ಎಕ್ಸ್​ ಖಾತೆಯಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿರುವ ಅರವಿಂದ ಲಿಂಬಾವಳಿ, ಅವುಗಳ ಬಗ್ಗೆ ಧ್ವನಿ ಎತ್ತುವಲ್ಲಿ ವಿಪಕ್ಷವಾಗಿ ಬಿಜೆಪಿ ವಿಫಲ ಕಂಡಿದೆ ಮತ್ತು ತಮ್ಮ ಪಕ್ಷದ ಅಧ್ಯಕ್ಷರು ಮತ್ತು ವಿಪಕ್ಷ ನಾಯಕರ ನಡುವೆ ಹೊಂದಾಣಿಕೆ ಇಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ಇಂದಿನ ನಮ್ಮ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರ ಮತ್ತು ಆತಂಕವಾಗುತ್ತಿದೆ ಎಂದಿದ್ದಾರೆ.
ಅರವಿಂದ್​ ಲಿಂಬಾವಳಿ ಎಕ್ಸ್​ ಪೋಸ್ಟ್​ನಲ್ಲಿ ಏನಿದೆ?ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಘೆ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಬೇಕು, ಜನರ ಸಂಕಷ್ಟಕ್ಕೆ ಕನ್ನಡಿಯಾಗಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಅನಿಸದೇ ಹೋದುದು ದುರ್ದೈವ! ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ ನಾಯಕರು ಮಾತಾಡಲೇ ಇಲ್ಲ.
ಶಾಸಕರೂ ಆಗಿರುವ ನಮ್ಮ ಪಕ್ಷದ ಅಧ್ಯಕ್ಷರು ಮತ್ತು ಪ್ರತಿಪಕ್ಷ ನಾಯಕರ ಮಧ್ಯೆ ಸಾಮರಸ್ಯ, ಹೊಂದಾಣಿಕೆ ಮತ್ತು ತಾಳ-ಮೇಳ ಇಲ್ಲದೇ ಹೋದದ್ದು ವಿಷಾದನೀಯ. ಇದರ ಸಂಪೂರ್ಣ ಲಾಭವನ್ನು ಆಡಳಿತ ಪಕ್ಷ ಪಡೆಯಲು ಸಹಾಯಕವಾಯಿತು. ಸಿಕ್ಕ ಅವಕಾಶ ಮತ್ತು ಸಮಯವನ್ನು ಸದನದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳದೇ, ಇಡೀ ಅಧಿವೇಶನದಲ್ಲಿ ವೃಥಾ ಕಾಲಹರಣ ಮಾಡಿ, ಇನ್ನೂ ಒಂದು ದಿನ ಬಾಕಿ ಇರುವಾಗಲೇ ಸದನದ ಕಲಾಪಗಳನ್ನು ಮೊಟಕುಗೊಳಿಸುವಲ್ಲಿ ಆಡಳಿತ ಪಕ್ಷದವರೊಂದಿಗೆ ಕೈಜೋಡಿಸಿದ ನಮ್ಮ ಪಕ್ಷದ ನಾಯಕರ ನಡೆ ಪ್ರಶ್ನಾರ್ಹ.
ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಗ್ಯಾರಂಟಿ ಯೋಜನೆ ಹಣಕ್ಕೆ ಎಸ್‌ಸಿ-ಎಸ್‌ಟಿಗೆ ಮೀಸಲಿಟ್ಟಿರುವ ಅನುದಾನ ದುರ್ಬಳಕೆ… ಹೀಗೆ ಯಾವ ವಿಷಯವನ್ನೂ ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಮ್ಮ ಪಕ್ಷಕ್ಕೆ ಸಾಧ್ಯವಾಗಲಿಲ್ಲ. ಈ ವಿಷಯಗಳ ಬಗ್ಗೆ ಪರಿಣಾಮಕಾರಿಯಾಗಿ ವಿಷಯ ಮಂಡಿಸಲು ಪ್ರತಿಪಕ್ಷದ ನಾಯಕರೂ ವಿಫಲರಾದರು. ಆಡಳಿತ ಪಕ್ಷದೊಂದಿಗೆ ಪ್ರತಿಪಕ್ಷ ಶಾಮೀಲಾಗಿದೆಯಾ ಎಂದು ಜನ ಮಾತಾಡಿಕೊಳ್ಳುವಂತಾಯಿತು. ಮೈಸೂರಿನಲ್ಲಿ ಮುಡಾ ವಿರುದ್ಧ ನಡೆಸಿದ ಹೋರಾಟ ಕಣ್ಣೊರೆಸುವ ತಂತ್ರದಂತೆ ಕಂಡಿತು.
ಒಟ್ಟಾರೆ ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಅಧಿವೇಶನದಲ್ಲಿ ನಾಯಕರ ನಡೆ ಗಮನಿಸಿದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಜನಪರ ಹೋರಾಟಗಳಲ್ಲಿ ಹೇಗೆ ತನ್ನನ್ನು ತೊಡಗಿಸಿಕೊಳ್ಳಬಹುದು ಎಂಬುದು ನಿಷ್ಠಾವಂತ, ದೇವದುರ್ಲಭ ಕಾರ್ಯಕರ್ತರಿಗೆ ಆತಂಕದ ವಿಷಯವಾಗಿದೆ. ಬೆರಳೆಣಿಕೆಯಷ್ಟು ಶಾಸಕರನ್ನು ಹೊಂದಿದ್ದ ದಿನಗಳಲ್ಲೂ ಕಲಾಪಗಳಲ್ಲಿ ಆರ್ಭಟಿಸುತ್ತಿದ್ದ, ಜನರ ಆಶೋತ್ತರಗಳಿಗೆ ದನಿಯಾಗುತ್ತಿದ್ದ ಬಿಜೆಪಿಯನ್ನು ನೋಡಿದ್ದ ನನಗೆ, ಇಂದಿನ ನಮ್ಮ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರ ಮತ್ತು ಆತಂಕವಾಗುತ್ತಿದೆ ಎಂದು ಅರವಿಂದ ಲಿಂಬಾವಳಿ ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡು ತಮ್ಮದೇ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಘೀ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಬೇಕು, ಜನರ ಸಂಕಷ್ಟಕ್ಕೆ…
— Aravind Limbavali (@ArvindLBJP)July 26, 2024

ಭಾರತ ತಂಡದಲ್ಲಿ ನಾಯಕತ್ವ ಅನ್ನೋದು ಒಂದು ಹುದ್ದೆಯಷ್ಟೇ ಆದ್ರೆ ಕೊಹ್ಲಿ… ಬುಮ್ರಾ ಅಚ್ಚರಿಯ ಹೇಳಿಕೆ ವೈರಲ್​

ರೈತರಿಗೆ ಬಂಪರ್ ಗಿಫ್ಟ್​ ಕೊಟ್ಟ ಕಾಂಗ್ರೆಸ್​ ಸರ್ಕಾರ; 2 ಲಕ್ಷ ರೂ. ವರೆಗಿನ ಸಾಲ ಮನ್ನಾ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 − 6 =
Remember me
