ಮೈಸೂರು:ಬಿಜೆಪಿಯವರಿಂದ ಪ್ರಜಾಪ್ರಭುತ್ವದ ನಾಶ ಆಗುತ್ತಿದೆ. ಅವರಿಗೆ ಸಂವಿಧಾನ ಮುಖ್ಯವಲ್ಲ. ನಾಗ್ಪುರದ ಆರ್‌ಎಸ್‌ಎಸ್ ಕಚೇರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ, ರಾಜ್ಯ ಸರ್ಕಾರಗಳು ಪ್ರಯತ್ನ ಮಾಡಿಲ್ಲ. ಕೋಮು ಸೌಹಾರ್ದತೆ ಹಾಳು ಮಾಡಿ ರಾಜಕೀಯ ಲಾಭ ಮಾಡುತ್ತಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್​ ಪಕ್ಷ ಭಾರತ್ ಜೋಡೋ ಯಾತ್ರೆ ಮಾಡುತ್ತಿದೆ ಎಂದರು.
ಕೋಲಾರದಲ್ಲಿ ದೇವರ ಕೋಲು ಮುಟ್ಟಿದ್ದಕ್ಕೆ ಹಲ್ಲೆ ವಿಚಾರವನ್ನು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಖಂಡಿಸಿದ್ದಾರೆ. ಅಸ್ಪೃಶ್ಯತೆ ಆಚರಣೆ ಇನ್ನೂ ಜೀವಂತವಾಗಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೆ.ಎಸ್.ಈಶ್ವರಪ್ಪ ಮೀಸಲಾತಿ ಇನ್ನೂ ಎಷ್ಟು ವರ್ಷ ಬೇಕು ಅಂತ ಕೇಳಿದ್ದಾರೆ. ಮೀಸಲಾತಿಯ ಚಾರಿತ್ರಿಕ ಹಿನ್ನೆಲೆಯನ್ನೇ ಅವರು ಅರ್ಥ ಮಾಡಿಕೊಂಡಿಲ್ಲ. ಗೋವಿಂದ ಕಾರಜೋಳ ಸೇರಿದಂತೆ ಅವರ ಪಾರ್ಟಿಯಲ್ಲೂ ಬೇಕಾದಷ್ಟು ನಾಯಕರು ಇದ್ದಾರೆ. ಅವರನ್ನು ಯಾಕೆ ಇರಿಸಿಕೊಂಡಿದ್ದಾರೆ ಎಂದು ಪ್ರಶ್ನೆ ಮಾಡಿದರು.
ಹಿಜಾಬ್​ ವಿರುದ್ಧದ ಪ್ರತಿಭಟನೆಗೆ ಬೆಚ್ಚಿಬಿದ್ದ ಇರಾನ್​:ಮುಸ್ಲಿಂ ರಾಷ್ಟ್ರ ಧಗಧಗ- ಏಳು ಮಂದಿ ಸಾವು, ಇಂಟರ್​ನೆಟ್​ ಸ್ಥಗಿತ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four + fifteen =
Remember me
