ಚಿತ್ರದುರ್ಗ:ಮಾಜಿ ಸಚಿವ ಎಚ್.ಆಂಜನೇಯ ಅವರು ತಮ್ಮ 68 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಹುಟ್ಟುಹಬ್ಬದ ಆಚರಣೆಯ ವೇಳೆ ತಲ್ವಾರ್ ಪ್ರದರ್ಶಿಸಿದ್ದಾರೆ. ಸದ್ಯ ಅಂಜನೇಯ ಅವರು ತಲ್ವಾರ್ ಪ್ರದರ್ಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಟೀಕೆಗಳೂ ವ್ಯಕ್ತವಾಗುತ್ತಿವೆ.
ಬೆಂಬಲಿಗರು, ಅಭಿಮಾನಿಗಳೊಂದಿಗೆ ಎಚ್.ಆಂಜನೇಯ ಸಿಬಾರ ಬಳಿಯ ತೋಟದ ಮನೆ ಆವರಣದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಈ ವೇಳೆ ಕೇಕ್ ಕತ್ತರಿಸುವ ಮುನ್ನ ಬೆಂಬಲಿಗರು ನೀಡಿದ ತಲ್ವಾರ್ ಪ್ರದರ್ಶಿಸಿದ್ದಾರೆ. ಇನ್ನು ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಮಾಜಿ ಸಚಿವರಿಗೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಬೆಂಬಲಿಗರು ಶುಭಾಶಯ ಕೋರಿದ್ದಾರೆ.
ಇದನ್ನೂ ಓದಿ:ಜ್ಯೋತಿಷಿಗಳಿಗೆ ಡಿಮ್ಯಾಂಡ್! ನಾಮಪತ್ರ ಸಲ್ಲಿಕೆಗೆ ಶುಭ ಮುಹೂರ್ತದ ಕೋರಿಕೆ
ಹೊಳಲ್ಕೆರೆ ಕಾಂಗ್ರೆಸ್ ಕ್ಷೇತ್ರದ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಎಚ್.ಆಂಜನೇಯ ಅವರು ಚುನಾವಣೆ ಎದುರಿಸಲು ಅಂತಿಮ ಹಂತದ ಸಿದ್ಧತೆಯಲ್ಲಿದ್ದಾರೆ. ಈ ಬಾರಿಯೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿ, ಅಭಿಮಾನಿಗಳು, ಬೆಂಬಲಿಗರೊಂದಿಗೆ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.
ಮಾಜಿ ಸಚಿವ ಎಚ್.ಆಂಜನೇಯ ಅವರು ಚುನಾವಣೆಗೆ ಸ್ಪರ್ಧಿಸುತ್ತಿರುವಂತಹ ಹೊಳಲ್ಕೆರೆ ಕ್ಷೇತ್ರದಲ್ಲಿ 500ಕ್ಕೂ ಹೆಚ್ಚು ಲಿಂಗಾಯತ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ. ಹೊಳಲ್ಕೆರೆ ಕ್ಷೇತ್ರದಲ್ಲಿ ನಿರ್ಣಾಯಕ ಎಂದು ಹೇಳಲಾಗಿರುವ ಲಿಂಗಾಯತ ಸಮಾಜದ ಮತದಾರರು ಈ ಬಾರಿ ಕಾಂಗ್ರೆಸ್ ಕಡೆಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಸದ್ಯ ಬೆಳವಣಿಗೆಯಿಂದ ಹೊಳಲ್ಕೆರೆ ಕ್ಷೇತ್ರದಲ್ಲಿ ಮಾಜಿ ಸಚಿವ ಆಂಜನೇಯ ಅವರ ಕೈ ಬಲಪಡಿಸಿದಂತಾಗಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್​-ಬಿಜೆಪಿ ಉತ್ತರ-ದಕ್ಷಿಣ ಗುರಿ; ಹೆಚ್ಚು ಸ್ಥಾನಕ್ಕೆ ಎರಡೂ ಪಕ್ಷಗಳಿಂದ ಸ್ಪಷ್ಟ ಲೆಕ್ಕಾಚಾರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + ten =
Remember me
