ದಾವಣಗೆರೆ: ಮಾಜಿ ಸಚಿವೆ, ಸಮಾಜ ಸೇವಕಿ ನಾಗಮ್ಮ ಕೇಶವಮೂರ್ತಿ (89) ವಯೋಸಹಜ ಖಾಯಿಲೆಯಿಂದ ಇಂದು ತಮ್ಮ ನಿವಾಸದಲ್ಲಿ ನಿಧನರಾಗಿದ್ದು, ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ:ಸ್ಮಾಲ್-ಕ್ಯಾಪ್‌ಗಳ ಬೆಲೆಯಲ್ಲಿ ಅಪಾರ ಕುಸಿತ: ಹೂಡಿಕೆದಾರರಿಗೆ ಸೃಷ್ಟಿಯಾಗಿದೆಯೇ ದೊಡ್ಡ ಖರೀದಿ ಅವಕಾಶ?
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ನಾಗಮ್ಮರವರು ನಗರದ ಪಿಜೆ ಬಡಾವಣೆಯ ನಿವಾಸದಲ್ಲಿ ಇಂದು ಕೊನೆಯುಸಿರೆಳೆದರು. ಅವರಿಗೆ ಓರ್ವ ಪುತ್ರ ಇದ್ದಾರೆ. ಇಲ್ಲಿನ ವೈಕುಂಠ ಧಾಮದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ನಾಗಮ್ಮ ಕೇಶವಮೂರ್ತಿ ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ (1979-82 ಮತ್ತು 1993-95), ಭಾರೀ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿಯಾಗಿ (1992), ವಿಧಾನಸಭೆಯ ಉಪಾಧ್ಯಕ್ಷರಾಗಿ (1989-1992) ಸೇವೆ ಸಲ್ಲಿಸಿದ್ದರು.
ದಾವಣಗೆರೆ ವಿಧಾನಸಭಾ ಕ್ಷೇತ್ರವನ್ನು ಒಂದು ಬಾರಿ, ಮಾಯಕೊಂಡ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದರು. 1968ರಿಂದ 72ರವರೆಗೆ ದಾವಣಗೆರೆ ನಗರಸಭೆ ಸದಸ್ಯರಾಗಿದ್ದರು. ರಾಜಕಾರಣದಲ್ಲಿ ಸಕ್ರಿಯರಾಗಿದ್ದಾಗ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರಿಗೆ ಪರಿಚಿತರಾಗಿದ್ದರು. ಮಾಜಿ ಮುಖ್ಯಮಂತ್ರಿಗಳಾದ ಎಸ್. ನಿಜಲಿಂಗಪ್ಪ, ದೇವರಾಜ ಅರಸು, ಆರ್. ಗುಂಡೂರಾವ್ ಮುಂತಾದ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.
ಇದನ್ನೂ ಓದಿ:ಉತ್ತರ ಕನ್ನಡ ಲೋಕಸಭಾ ಕ್ಷೇತ್ರ-ನಾಮಪತ್ರ ಸಲ್ಲಿಕೆ ಯಾವಾಗಿನಿಂದ, ಎಲ್ಲಿ..? ಲೋಕಸಭಾ ಚುನಾವಣೆಯ ಸಿದ್ಧತೆಯ ವಿವರ ಇಲ್ಲಿದೆ
ಸಮಾಜ ಸೇವೆಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ನಾಗಮ್ಮ ಅವರು ದಾವಣಗೆರೆಯಲ್ಲಿ ವನಿತಾ ಸಮಾಜವನ್ನು ಕಟ್ಟಿ ಬೆಳೆಸಿದರು. ಆ ಸಂಸ್ಥೆ ಈಗ 53 ಅಂಗ ಸಂಸ್ಥೆಗಳನ್ನು ಹೊಂದಿದೆ. ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ವಿಜಯಪುರದ ಮಹಿಳಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಸೇರಿ ಹಲವಾರು ಪ್ರಸಸ್ತಿ ಪುರಸ್ಕಾರಗಳು ಲಭಿಸಿವೆ.
ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ…. ಕಾರ್ಯಕರ್ತರಲ್ಲಿ ಪ್ರತಾಪ್ ಸಿಂಹ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
