ದಾವಣಗೆರೆ:ಮಾಜಿ ಶಾಸಕ, ಹಿರಿಯ ರಾಜಕಾರಣಿ ಕೆ.ಮಲ್ಲಪ್ಪ (92) ಸೋಮವಾರ ಬೆಳಗ್ಗೆ ನಿಧನರಾದರು.
ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಒಟ್ಟು ಎರಡು ಬಾರಿ ಶಾಸಕರಾಗಿ, ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅವರು 1978ರಲ್ಲಿ ಮೊದಲ ಬಾರಿಗೆ ದಾವಣಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.
1983 ರಲ್ಲಿ ಹರಿಹರ ಕ್ಷೇತ್ರದಿಂದ ಜನತಾ ಪಕ್ಷದಿಂಮೊದಲ ಬಾರಿ ಶಾಸಕರಾಗಿ ಆಯ್ಕೆಯಾದರು. 1985ರಲ್ಲಿ ಮಾಯಕೊಂಡ ಕ್ಷೇತ್ರದಿಂದ 2ನೇ ಬಾರಿ ವಿಧಾನಸಭೆಗೆ ಚುನಾಯಿತರಾದರು. ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ರಾಜ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ:ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಯುವ ವಿಜ್ಞಾನಿ ಆಂಧ್ರದ ವಿಜಯವಾಡದಲ್ಲಿ ಪತ್ತೆ..!
ರಾಜಕೀಯವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಮಲ್ಲಪ್ಪ ಅಹಿಂದ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದರು. ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿದ್ದರು. ಒಂದು ಬಾರಿ ಲೋಕಸಭೆಗೆ ಸ್ಪರ್ಧಿಸಿ ಸೋಲು ಕಂಡಿದ್ದರು. ದಾವಣಗೆರೆ ನಗರಸಭೆ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ್ದರು.
ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾಗಿ ಕಾಗಿನೆಲೆ ಪೀಠ ಸ್ಥಾಪನೆಗೆ ಶ್ರಮಿಸಿದ್ದರು. ಸರಳತೆಗೆ ಹೆಸರಾಗಿದ್ದರು. ಸ್ವತಃ ಕುಸ್ತಿಪಟುವಾಗಿದ್ದರು. ಅವರಿಗೆ ಇಬ್ಬರು ಪುತ್ರರಿದ್ದಾರೆ.
ಕೋವಿಡ್​ನಿಂದ ಟ್ರಂಪ್ ಗುಣವಾಗಲೆಂದು ಉಪವಾಸ ವ್ರತ ಮಾಡ್ತಿದ್ದ ಅಭಿಮಾನಿ ಸಾವು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 19 =
Remember me
