ಬೆಂಗಳೂರು:ದಿವಂಗತ ಆರ್​. ಧ್ರುವನಾರಾಯಣ್ ನಿಧನದಿಂದ ತೆರವಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದರಾದ ಬಿ.ಎನ್​. ಚಂದ್ರಪ್ಪ ಅವರನ್ನು ಎಐಸಿಸಿ​ ನೇಮಿಸಿದೆ.
ಕಾಂಗ್ರೆಸ್​ನಿಂದ ಬಿ.ಎನ್​. ಚಂದ್ರಪ್ಪ ಅವರಿಗೆ ನೂತನ ಜವಬ್ದಾರಿಯನ್ನು ನೀಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ದಲಿತ (ಎಡಗೈ) ನಾಯಕ ಬಿ.ಎನ್ ಚಂದ್ರಪ್ಪ ಅವರನ್ನು ನೇಮಕ ಮಾಡಲಾಗಿದೆ.
ಎಸ್ಸಿ ಲೆಫ್ಟ್​ಗೆ ಕೆಪಿಸಿಸಿ ವರ್ಕಿಂಗ್ ಪ್ರೆಸಿಡೆಂಟ್ ಸ್ಥಾನ ನೀಡಬೇಕು ಎಂದು ಈ ಹಿಂದೆ ಎಡಗೈ ನಾಯಕರು ಒತ್ತಾಯ ಮಾಡಿದ್ದರು. ಇದೀಗ ಎಡಗೈ ನಾಯಕರ ಬೇಡಿಕೆಯನ್ನು ಕಾಂಗ್ರೆಸ್​ ಹೈಕಮಾಂಡ್​ ಈಡೇರಿಸಿದೆ. ಈ ಮೂಲಕ ದಲಿತ ಎಡಗೈ ಸಮುದಾಯವನ್ನು ಚುನಾವಣಾ ಸಂದರ್ಭದಲ್ಲಿ ಮನವೊಲಿಸಿದಂತಿದೆ.
ಇದನ್ನೂ ಓದಿ:ನೀವು ಕೂಡ ಒಂದು ಹೆಣ್ಣಿಗೆ ಹುಟ್ಟಿದವರಲ್ಲವೇ? ಅಭಿಮಾನಿ ಕಾಮೆಂಟ್​ಗೆ ಪವನ್ ಕಲ್ಯಾಣ್​ ಮಾಜಿ ಪತ್ನಿ ಕಣ್ಣೀರು

ಕಾಂಗ್ರೆಸ್​ ಕಟ್ಟಾಳು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್​. ಧ್ರುವನಾರಾಯಣ (61) ಅವರು ತೀವ್ರ ಹೃದಯಾಘಾತದಿಂದ ಮೈಸೂರಿನ ಡಿಆರ್​ಎಂ ಆಸ್ಪತ್ರೆಯಲ್ಲಿ ಮಾ.11ರಂದು ವಿಧಿವಶರಾದರು. ಅವರು ಕಾಂಗ್ರೆಸ್​ ಪಕ್ಷದ ನಿಷ್ಠಾವಂತ ನಾಯಕರಾಗಿದ್ದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದಲ್ಲಿ ಗೆಲುವು ಸಾಧಿಸಿದ್ದರು.
ಇದನ್ನೂ ಓದಿ:ಬಂಡೀಪುರ ಹುಲಿ ಯೋಜನೆಗೆ 50 ವರ್ಷ: ವ್ಯಾಘ್ರಗಳ ಸುರಕ್ಷಿತ ನೆಲೆಯ ಬಗ್ಗೆ ತಿಳಿಯಬೇಕಾದ ಮಾಹಿತಿ ಇಲ್ಲಿದೆ…
ಧ್ರುವನಾರಾಯಣ ನಿಧನ ಬೆನ್ನಲ್ಲೇ ಅವರ ಪತ್ನಿ ವೀಣಾ ಧ್ರುವನಾರಾಯಣ ಕೂಡ ಏಪ್ರಿಲ್​ 7ರಂದು ವಿಧಿವಶರಾಗಿದ್ದಾರೆ.
ತಂದೆ ಧ್ರುವನಾರಾಯಣ ಮೃತಪಟ್ಟ ಹಿನ್ನೆಲೆಯಲ್ಲಿ ದರ್ಶನ್​ ಅವರಿಗೆ ನಂಜನಗೂಡು ಕ್ಷೇತ್ರದಿಂದ ಕಾಂಗ್ರೆಸ್​ ಟಿಕೆಟ್​ ನೀಡಲಾಗಿದೆ. ತಂದೆಯ ಸಾವಿನ ನೋವಲ್ಲೂ ಚುನಾವಣಾ ಚಟುವಟಿಕೆಯಲ್ಲಿ ಬಿಜಿಯಾಗಿದ್ದ ದರ್ಶನ್​ಗೆ ಇದೀಗ ತಾಯಿಯೂ ಮೃತಪಟ್ಟ ಸುದ್ದಿ ತೀವ್ರ ಆಘಾತ ನೀಡಿದೆ.
ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ: ತಂದೆ ಬೆನ್ನಲ್ಲೇ ತಾಯಿಯನ್ನೂ ಕಳೆದುಕೊಂಡ ದರ್ಶನ್​

ನೀವು ಕೂಡ ಒಂದು ಹೆಣ್ಣಿಗೆ ಹುಟ್ಟಿದವರಲ್ಲವೇ? ಅಭಿಮಾನಿ ಕಾಮೆಂಟ್​ಗೆ ಪವನ್ ಕಲ್ಯಾಣ್​ ಮಾಜಿ ಪತ್ನಿ ಕಣ್ಣೀರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
