ಬೆಂಗಳೂರು:ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೆಡಿಎಸ್​ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​. ಡಿ. ದೇವೇಗೌಡ ಅವರು ದೇಶದ ಜನತೆಗೆ ಸಂದೇಶವೊಂದನ್ನು ರವಾನಿಸಿದ್ದಾರೆ.
ಟ್ವೀಟ್​ ಮಾಡಿರುವ ಎಚ್​ಡಿಡಿ ನನ್ನ ಸಹ ಭಾರತೀಯರಿಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು. ನಾನು 91ನೇ ವಯಸ್ಸಿನಲ್ಲಿದ್ದೇನೆ ಮತ್ತು ನಾನಿನ್ನೂ ಉಳಿದುಕೊಳ್ಳಲು ಯೋಗವು ಸಹಾಯ ಮಾಡಿದೆ. ಯೋಗವನ್ನು ಮಾಡಿ, ಅದರ ಲಾಭವನ್ನು ಪಡೆದುಕೊಳ್ಳಲು ನಾನು ಎಲ್ಲರನ್ನೂ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು: ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆ
Warm greetings to my fellow Indians on International#YogaDay. I have touched the age of 91 and yoga has helped sustain me. I urge everybody to practice yoga and discover its benefits.pic.twitter.com/Nep9SNr2uN
— H D Devegowda (@H_D_Devegowda)June 21, 2023

ಇಂದು ವಿಶ್ವವು 9ನೇ ಆವೃತ್ತಿಯ ಅಂತಾರಾಷ್ಟ್ರೀಯ ಯೋಗ ದಿನದ ಸಂಭ್ರಮದಲ್ಲಿದೆ. ಪ್ರಧಾನಿ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದು, ಭಾರತೀಯ ಕಾಲಮಾನ ಪ್ರಕಾರ ಇಂದು ಸಂಜೆ 5.30ಕ್ಕೆ ನ್ಯೂಯಾರ್ಕ್​ನಲ್ಲಿರುವ ವಿಶ್ವಸಂಸ್ಥೆಯ ಮುಖ್ಯ ಕಚೇರಿಯಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಿ ಮೋದಿ ಅವರ ಮನವಿಯಿಂದಾಗಿ 2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಾರಂಭವಾಯಿತು. ಪ್ರತಿ ವರ್ಷ ಜೂನ್​ 21ರಂದು ನಡೆಯುವ ವಾರ್ಷಿಕ ಕಾರ್ಯಕ್ರಮವನ್ನು ಆಯುಷ್​ ಸಚಿವಾಲಯದ ಅಡಿಯಲ್ಲಿ ನಡೆಯುತ್ತದೆ.(ಏಜೆನ್ಸೀಸ್​)
ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗವು ಜಾಗತಿಕ ಚಳುವಳಿಯಾಗಿದೆ: ಪ್ರಧಾನಿ ಮೋದಿ ವಿಡಿಯೋ ಸಂದೇಶ

ಅಂತಾರಾಷ್ಟ್ರೀಯ ಯೋಗ ದಿನ: ದೇಶಾದ್ಯಂತ ಗಣ್ಯರ, ಯೋಧರ ಯೋಗ ಪ್ರದರ್ಶನದ ಝಲಕ್​ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
