ಬೆಂಗಳೂರು:ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸಂವಿಧಾನದ 371ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಿ, ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.
ಸಚಿವ ಸಂಪುಟದ ಉಪಸಸಮಿತಿ ಅಧ್ಯಕ್ಷರೂ ಆದ ಸಚಿವರು, ವಿಕಾಸಸೌಧದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜತೆಗೆ ಸಭೆ ನಡೆಸಿದರು.
ಉದ್ಯೋಗ ನೇಮಕಾತಿಗೆ ಸಂಬಂಧಿಸಿದ ಅರ್ಜಿ ಆಹ್ವಾನ, ಆಯ್ಕೆ ಪಟ್ಟಿ ಪ್ರಕಟಣೆ ವಿಷಯದಲ್ಲಿ ಪದೇ ಪದೆ ಕೆಲವಾರು ಗೊಂದಲಗಳು ಉದ್ಭವಿಸುತ್ತಿವೆ. ಈ ಸಮಸ್ಯೆಗೆ ಶಾಶ್ವತ ಪರಿಹಾರದ ಅಗತ್ಯವಿದೆ ಎಂದು ತಿಳಿಹೇಳಿದರು.
ಶಾಸನಾತ್ಮಕ ವಿಶೇಷ ಸ್ಥಾನಮಾನದ ಉದ್ದೇಶ ಈಡೇರಿಸಲು, ನಿಯಮಗಳ ಪರಿಣಾಮಕಾರಿ ಪಾಲನೆ ದೃಷ್ಟಿಯಿಂದ ಗೊಂದಲ ನಿವಾರಣೆಗಾಗಿ ಮಾರ್ಗಸೂಚಿಗಳನ್ನು ರಚಿಸಿ, ಸಚಿವ ಸಂಪುಟದ ಉಪ ಸಮಿತಿಯ ಮುಂದಿನ ಸಭೆಯಲ್ಲಿ ಮಂಡಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಸೂಚಿಸಿದರು.
ಕಾಯ್ದೆ, ನಿಯಮಗಳ ಪ್ರಕಾರ ಶಿಕ್ಷಣ, ಉದ್ಯೋಗ, ಬಡ್ತಿ ಅನುಷ್ಠಾನಕ್ಕೆ ತರಬೇಕು. ಆದರೆ ಸಮರ್ಪಕ ಜಾರಿಗೆ ಸ್ಪಷ್ಟ ಮಾರ್ಗಸೂಚಿಯಿಲ್ಲದೆ ಗೋಜಲುಗಳು ತಲೆದೋರುತ್ತಿವೆ. ಕಾಯ್ದೆ ಅಸಮರ್ಪಕ ಜಾರಿ ವಿರುದ್ಧ ಕಲ್ಯಾಣ ಕರ್ನಾಟಕ ಪ್ರದೇಶದ ಜನರು ರೊಚ್ಚಿಗೆದ್ದಿದ್ದಾರೆ.
ಪ್ರಾಂತದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಚಳವಳಿಗಳು ನಡೆದಿವೆ. ಬೆನ್ನಲ್ಲೇ ಪ್ರಾಂತದ ಸಚಿವರಿಬ್ಬರು ಜಾಗೃತರಾಗಿದ್ದಾರೆ. ಈ ಕಾರಣಕ್ಕೆ ಪ್ರಮುಖ ಅಧಿಕಾರಿಗಳ ಸಭೆ ನಡೆಸಿ, ಕ್ರಮವಹಿಸಲು ಮುಂದಾಗಿದ್ದಾರೆ.
ಈ ಸಭೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಡಿ.ರಂದೀಪ್, ಕೆಪಿಎಸ್‌ಸಿ ಕಾರ್ಯದರ್ಶಿ ಡಾ.ಕೆ.ರಾಕೇಶ್ ಕುಮಾರ್, ಕೆಇಎ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
