ಬೆಂಗಳೂರುಭಾರತೀಯ ದಂಡ ಸಂಹಿತೆಯನ್ನು (ಐಪಿಸಿ) ಭಾರತೀಕರಣಗೊಳಿಸುತ್ತಿರುವ ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳಲ್ಲಿ ಮಾತ್ರ ಬ್ರಿಟಿಷ್ ಕಾಯ್ದೆಗಳ ಪಳೆಯುಳಿಕೆಯನ್ನು ಉಳಿಸಿಕೊಂಡಿದೆ ಎಂದು ಪತ್ರಕರ್ತ ಪಿ. ಸಾಯಿನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘ ಗುರುವಾರ ಅರಮನೆ ರಸ್ತೆಯಲ್ಲಿರುವ ಬಸಪ್ಪ ಕೊಂಡಜ್ಜಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಪರ್ಯಾಯ ಕೃಷಿ ಧೋರಣೆಗಳು’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ಜಾರಿಗೊಳಿಸಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಆದರೆ, ಗೋ ಹತ್ಯಾ ನಿಷೇಧ ಕಾಯ್ದೆ ಸೇರಿ ವಿವಿಧ ಕಾಯ್ದೆಗಳಲ್ಲಿ ಬ್ರಿಟೀಷರ ಕಾಯ್ದೆಗಳನ್ನೇ ಇಂದಿಗೂ ಉಳಿಸಿಕೊಂಡಿರುವ ಪರಿಣಾಮ, ಕೃಷಿಕರು ಮಾತ್ರವಲ್ಲದೆ ವಿವಿಧ ಸ್ತರದ ಸಮುದಾಯಗಳ ಮೇಲೆ ಅದರ ಪರಿಣಾಮ ಬೀರುತ್ತಿದೆ ಎಂದು ಹೇಳಿದರು.
ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಗೋ ಹತ್ಯಾ ನಿಷೇಧ ಕಾಯ್ದೆ ಜಾರಿಗೊಳಿಸಿದರು. ಆದರೆ, ಇಂದು ನಿಜವಾಗಿ ಸಮಸ್ಯೆಗೆ ತುತ್ತಾಗಿರುವುದು, ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ ನಡೆಸುತ್ತಿರುವ ರೈತರು, ಚರ್ಮದ ಉದ್ಯಮ ನಡೆಸುತ್ತಿದ್ದ ದಲಿತರು, ಹಿಂದುಳಿದ ವರ್ಗ, ಕೊಲ್ಹಾಪುರಿ ಚಪ್ಪಲಿ ವಹಿವಾಟು ನಾಮ್ ಕೇ ವಾಸ್ತೆಯಾಗಿದೆ ಎಂದು ವಿಶ್ಲೇಷಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + fourteen =
Remember me
