ತುಮಕೂರು:ಕಳೆದ ತಿಂಗಳಲ್ಲಿ ಮೇಲಿಂದ ಮೇಲೆ ಅಪಘಾತ ಸಂಭವಿಸಿ ಸಾವು-ನೋವುಗಳು ಸಂಭವಿಸಿದ್ದ ತುಮಕೂರು ಜಿಲ್ಲೆಯಲ್ಲಿ ಇದೀಗ 24 ಗಂಟೆಗಳಲ್ಲಿ ನಾಲ್ಕು ಅಪಘಾತಗಳು ಸಂಭವಿಸಿ, ಒಟ್ಟು ನಾಲ್ವರು ಸಾವಿಗೀಡಾಗಿದ್ದಾರೆ.
ತಿಪಟೂರು ತಾಲೂಕಿನ ಕರಡಾಳು ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಶಾಂತನಹಳ್ಳಿ ಗ್ರಾಮದ ಸದಾಶಿವಯ್ಯ (62) ಸ್ಥಳದಲ್ಲೇ ಸಾವಿಗೀಡಾದರು. ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯ ಬಳಿ ಸಂಭವಿಸಿ ಮತ್ತೊಂದು ಅಪಘಾತದಲ್ಲಿ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಹಾಸನದ ಚೌಡನಕುಪ್ಪೆ ಗ್ರಾಮದ ಯುವಕ ಅಭಿಷೇಕ್ (23) ಮೃತಪಟ್ಟಿದ್ದಾನೆ.
ಇದನ್ನೂ ಓದಿ:ಬಟ್ಟೆ ಧರಿಸದೆ ಮಲಗುವುದರಿಂದ ಏನು ಪ್ರಯೋಜನ?; ಇಲ್ಲಿದೆ ಅಧ್ಯಯನದ ಅಂಶಗಳು..
ಇನ್ನೊಂದು ಅಪಘಾತದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಟಾಟಾ ಶೋ ರೂಂ ಮುಂಭಾಗ ಈ ಅಪಘಾತ ಸಂಭವಿಸಿದ್ದು, ಬೈಕ್​ ಸವಾರ ಪುನೀತ್ ಕುಮಾರ್ (28) ಮೃತಪಟ್ಟಿದ್ದಾನೆ. ಮಗದೊಂದು ಅಪಘಾತದಲ್ಲಿ ಹಸುವಿಗೆ ಡಿಕ್ಕಿ ಹೊಡೆದು ಬಿದ್ದ ಬೈಕ್ ಸವಾರ ಸಾವಿಗೀಡಾಗಿದ್ದಾನೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ತಣ್ಣೇನಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಕಿಶೋರ್ ಎಂಬಾತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಈ ಪ್ರದೇಶದಲ್ಲಿ ಪದೇಪದೆ ಅಪಘಾತ; 3 ದಿನಗಳಲ್ಲಿ ನಾಲ್ಕೈದು ಆ್ಯಕ್ಸಿಡೆಂಟ್: ಇಂದು ಮತ್ತೊಂದು ಸಾವು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
