ಬೆಳಗಾವಿ/ಚಿಕ್ಕೋಡಿ:ಮಹಾರಾಷ್ಟ್ರದ ಸಹ್ಯಾದ್ರಿಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಹಾಗೂ ಬೆಳಗಾವಿ ಜಿಲ್ಲೆಯಲ್ಲೂ ಮಳೆ ಸುರಿಯುತ್ತಿರುವುದರಿಂದ ಇಲ್ಲಿನ 4 ಸೇತುವೆ ಬುಧವಾರ ಮುಳುಗಡೆಯಾಗಿವೆ. ನಿಪ್ಪಾಣಿ ತಾಲೂಕಿನ ಕಾರದಗಾ ಬಳಿ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ವಿುಸಿರುವ ಕಾರದಗಾ-ಭೋಜ, ವೇದಗಂಗಾ ನದಿಗೆ ಅಡ್ಡಲಾಗಿರುವ ಬೋಜವಾಡಿ-ಕುನ್ನೂರ ಹಾಗೂ ಬಾರವಾಡ-ಕುನ್ನೂರ ಬ್ರಿಡ್ಜ್ ಕಂ ಬಾಂದಾರಗಳು ಜಲಾವೃತಗೊಂಡಿವೆ. ರಾಯಬಾಗ ತಾಲೂಕಿನ ಬಾವನಸೌಂದತ್ತಿ- ಮಾಂಜರಿ ಸಂಪರ್ಕ ಸೇತುವೆ ಮುಳುಗಡೆಯಾಗಿದೆ. ಮಳೆಗಾಲದ ಆರಂಭದಲ್ಲೇ ನದಿಗಳಿಗೆ ನೀರು ಹರಿದು ಬರುತ್ತಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ವಿುಸಿರುವ ಯಡೂರ-ಕಲ್ಲೋಳ ಪ್ರಮುಖ ಸೇತುವೆಯೂ ಮುಳುಗಡೆಯಾಗುವ ಸ್ಥಿತಿಯಲ್ಲಿದೆ.
ವಿದ್ಯುತ್ ಕಡಿತ:ಖಾನಾಪುರದಲ್ಲಿ ಮಳೆ ಮುಂದುವರಿದಿದ್ದು, ಕಾಡಂಚಿನ 50ಕ್ಕೂ ಅಧಿಕ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಬೆಳಗಾವಿ ನಗರದಲ್ಲೂ ಉತ್ತಮ ಮಳೆ ಸುರಿಯುತ್ತಿದೆ. ಘಟಪ್ರಭಾ ನದಿಯ ಒಳಹರಿವಿನ ಪ್ರಮಾಣ 6 ಸಾವಿರ ಕ್ಯೂಸೆಕ್​ಗೆ ಹೆಚ್ಚಳವಾಗಿದೆ.
ಇದನ್ನೂ ಓದಿ;ರಾಷ್ಟ್ರೀಯ ಭದ್ರತಾ ಮಂಡಳಿ ನೀಡಿದೆ ಎಚ್ಚರಿಕೆ …! ಈ ಚೀನಿ ಆ್ಯಪ್​ಗಳಿದ್ದರೆ ಅಪಾಯ
ವಿವಿಧೆಡೆ ಮುಂಗಾರು ಬಿರುಸು:ಬೆಂಗಳೂರು: ಕರಾವಳಿ ಸೇರಿ ವಿವಿಧೆಡೆ ಮುಂಗಾರು ಬಿರುಸುಗೊಂಡಿದ್ದು, ಬುಧವಾರ ಉತ್ತಮವಾಗಿ ಮಳೆ ಸುರಿದಿದೆ. ಉತ್ತರ ಕನ್ನಡ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ. ಅರಬ್ಬಿ ಸಮುದ್ರದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಮಳೆಯಾಗಿದ್ದು, ಶಿರಸಿ-ಯಲ್ಲಾಪುರ ರಸ್ತೆ ಬಂದ್ ಆಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದೆ. ಜಲಾಶಯಗಳ ಒಳಹರಿವಿನ ಪ್ರಮಾಣ ಏರಿಕೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯಕ್ಕೆ 3,315 ಕ್ಯೂಸೆಕ್, ಭದ್ರಾ ಡ್ಯಾಂಗೆ 3,746 ಕ್ಯೂಸೆಕ್ ನೀರು ಬರುತ್ತಿದೆ. ತುಂಗಾ ಡ್ಯಾಂ ಮಟ್ಟ 587.57(ಗರಿಷ್ಠ 588.24) ಮೀಟರ್ ತಲುಪಿದೆ. ಹಾಗಾಗಿ 3,383 ಕ್ಯೂಸೆಕ್ ಒಳಹರಿವಿನಲ್ಲಿ 3,680 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಜೂ.18ರಂದು ಆರೆಂಜ್ ಹಾಗೂ ಜೂ.19ರಿಂದ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂ.18 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ;ಈ ಕಾರನ್ನು ಒಮ್ಮೆ ಚಾರ್ಜ್​ ಮಾಡಿದರೆ, ಬೆಂಗಳೂರಿನಿಂದ ಬೀದರ್​ಗೆ ಹೋಗಬಹುದು…!
ಮಡಿಕೇರಿಯಲ್ಲಿ ಭೂಕುಸಿತ:ಮಡಿಕೇರಿಯಲ್ಲಿ ಸತತ ಮಳೆಯಿಂದಾಗಿ ಚಾಮುಂಡೇಶ್ವರಿ ನಗರದಲ್ಲಿ ಭೂಕುಸಿತ ಉಂಟಾಗಿದೆ. ಬುಧವಾರ ರಾತ್ರಿ ಮನೆ ಮೇಲೆ ಭೂ ಕುಸಿತವಾಗಿಸ್ಥಳೀಯರು ಆತಂಕಕ್ಕೀಡಾಗಿದ್ದು, ಎಲ್ಲರನ್ನೂ ಗಾಳಿಬೀಡು ಪರಿಹಾರ ಕೇಂದ್ರಕ್ಕೆ ಸ್ಥಳಾಂತರವಾಗುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಸರ್ಕಾರಿ ಜಾಹೀರಾತಿನಲ್ಲಿ ನೀಲಿಚಿತ್ರ ತಾರೆ; ನೆಟ್ಟಿಗರಿಂದಲೂ ಮೆಚ್ಚುಗೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − fifteen =
Remember me
