ಮಂಡ್ಯ:ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟಿನ ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿಂದು (ಜೂ. 4) ನಡೆದಿದೆ.
ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಹೇಮಂತ್, ಶರತ್ ಹಾಗೂ ನವೀನ್ ಸೇರಿ ನಾಲ್ವರ ಸಾವಾಗಿದೆ. ಮತ್ತೊಬ್ಬನ ಹೆಸರು ತಿಳಿದುಬಂದಿಲ್ಲ. ಮೃತರು ಬೆಂಗಳೂರಿನ ನೆಲಮಂಗಲ ಮೂಲದವರು ಎನ್ನುವ ಮಾಹಿತಿ ಲಭ್ಯವಾಗಿದೆ. ಲಾರಿ ಮತ್ತು ಕಾರು ಬೆಂಗಳೂರಿನಿಂದ ಮೈಸೂರು ಕಡೆ ತೆರಳುತ್ತಿತ್ತು. ಬೆಳಗಿನ ಜಾವ 5 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ನಟಿಗೆ ಖಾಸಗಿ ಅಂಗ ಪ್ರದರ್ಶನ: ಜೈಲಿನಿಂದ ಬಿಡುಗಡೆಯಾದ ಆರೋಪಿಗೆ ಅದ್ಧೂರಿ ಸ್ವಾಗತ!
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ಬಿದ್ದಿದ್ದು, ನಾಲ್ವರು ಕೂಡ ಕಾರಿನಲ್ಲೇ ಅಸುನೀಗಿದ್ದಾರೆ. ಘಟನೆಯ ಬಳಿಕ ಲಾರಿ ಚಾಲಕ ಎಸ್ಕೇಪ್ ಆಗಿದ್ದಾರೆ.
ಘಟನಾ ಸ್ಥಳಕ್ಕೆ ನಾಗಮಂಗಲ ಡಿವೈಎಸ್ಪಿ, ಸಿಪಿಐ ಹಾಗೂ ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಗ್ಯಾರಂಟಿ ಲಾಭದ ಬಗ್ಗೆ ಜನರಲ್ಲಿ ಬಿಸಿಬಿಸಿ ಚರ್ಚೆ: ಉಚಿತ ವಿದ್ಯುತ್ ವಿಚಾರದಲ್ಲಿ ನೂರೆಂಟು ಪ್ರಶ್ನೆ

ನೂತನ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − thirteen =
Remember me
