ಚಾಮರಾಜನಗರ:ಸಂಕ್ರಾಂತಿ ಹಬ್ಬಕ್ಕೆ ವಸ್ತುಗಳನ್ನು ಖರೀದಿ ಮಾಡಲು ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದ್ದು, ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ವರದಿಯಾಗಿದೆ.
ಇದನ್ನೂ ಓದಿ:‘ಇಬ್ಬರು ಸ್ಟಾರ್​ ಕ್ಯಾಪ್ಟನ್​ಗಳ ಮನಗೆದ್ದ ಶಿವಂ’! ಟಿ-20 ಸ್ಪೆಷಲಿಸ್ಟ್​ ಸುರೇಶ್ ರೈನಾ ಹೇಳಿದ ನಾಯಕರು ಯಾರು?
ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ನಿವಾಸಿಗಳಾದ ಸಂತೋಷ್ (32), ಅವರ ಪತ್ನಿ ಸೌಮ್ಯ (27), ಪುತ್ರಿ ನಿತ್ಯಾ ಸಾಕ್ಷಿ (4) ಮತ್ತು ಪುತ್ರ ಅಭಿಷೇಕ್ (9) ಮೃತ ದುರ್ದೈವಿಗಳಾಗಿದ್ದು, ಹಬ್ಬಕ್ಕೆ ಬೇಕಾದ ವಸ್ತುಗಳನ್ನು ತರಲು ಸಂತೋಷ್ ಕುಟುಂಬ ಸದಸ್ಯರೊಂದಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಹೊಸ ಬಟ್ಟೆ ಖರೀದಿಸಲು ತನ್ನ ಬೈಕ್​ನಲ್ಲಿ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.
ಜಿನಕನಹಳ್ಳಿ ರಸ್ತೆಯಲ್ಲಿ ಭತ್ತ ಕಟಾವು ಮಾಡುವ ಯಂತ್ರದ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಂತೋಷ್​ ಅವರ ಪುತ್ರ ಅಭಿಷೇಕ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪ್ರಕರಣವನ್ನು ಕೊಳ್ಳೆಗಾಲ ಗ್ರಾಮಾಂತರ ಪೊಲೀಸರು ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ,(ಏಜೆನ್ಸೀಸ್).
ಸ್ಟಾರ್​ ನಟರಿಲ್ಲದ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಕಮಾಲ್​! ಒಟಿಟಿಗೆ ಬಂದು ಎರಡು ವಾರ ಕಳೆದ್ರೂ ನಿಂತಿಲ್ಲ ಕಲೆಕ್ಷನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + sixteen =
Remember me
