ವಿಜಯಪುರ:ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ಬೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಹಾಗೂ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಬಿಜೆಪಿಗೆ ಮತ ಹಾಕಬೇಡಿ! ಒಂದು ವೇಳೆ ಗೆದ್ದರೆ ಸಂವಿಧಾನವನ್ನು ಬದಲಾಯಿಸ್ತಾರೆ: ರಾಹುಲ್ ಗಾಂಧಿ ಟೀಕೆ
ಅಪಘಾತದಲ್ಲಿ ಸಾವನ್ನಪ್ಪಿದವರನ್ನು ವಿಜಯಪುರ ಮೂಲದ ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಸುನಿಲಾಲ್ ಪತ್ತಾರ (52),ಪುಷ್ಟಾ ರವಿನಾಥ ಪತ್ತಾರ (40), ಮೇಘರಾಜ ಅರ್ಜುನಸಿಂಗ್ ರಜಪೂತ (12) ಎಂದು ಗುರುತಿಸಲಾಗಿದೆ. ವಿಜಯಪುರದಿಂದ ಜಮಖಂಡಿಯ ದೇವಸ್ಥಾನಕ್ಕೆ KA 28 D 1021 ನಂಬರಿನ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಭೀಕರ ಅಪಘಾತ ಸಂಭವಿಸಿದೆ.
ಜಮಖಂಡಿಯಿಂದ ಸಿಮೆಂಟ್ ಲೋಡ್ ತುಂಬಿದ್ದ KA 16 B 6472 ನಂಬರಿನ ಲಾರಿ ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ. ಸ್ಥಳದಲ್ಲಿದ್ದ ಶವಗಳನ್ನು ಬಬಲೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತೆರವುಗೊಳಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನೆವಣೆ ಹಾಗೂ ಇತರ ಅಧಿಕಾರಿಗಳ ಭೇಟಿ ನೀಡಿದ್ದು, ಸ್ಥಳ ಪರಿಶೀಲಿಸುತ್ತಿದ್ದಾರೆ.
4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
