ಮಂಡ್ಯ:ಕೆಎಸ್​ಆರ್​ಟಿಸಿ ಬಸ್​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್​ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಹಾಸನ ಕಡೆಯಿಂದ ಬರುತ್ತಿದ್ದ ಶಿಫ್ಟ್ ಕಾರು, ಮುಂದೆ ಹೋಗುತ್ತಿದ್ದ KSRTC ಬಸ್‌ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರನ್ನು ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ಬೆಂಗಳೂರಿನಲ್ಲಿ ವಾಸವಿದ್ದ ರಾಜಸ್ಥಾನ ಮೂಲದ ಪಂಕಜ್ ಶರ್ಮಾ, ಬೆಂಗಳೂರಿನ ವಂಶಿಕೃಷ್ಣ ಹಾಗೂ ಧಾರವಾಡದ ರಘುನಾಥ್ ಭಜಂತ್ರಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ದಿಗಂತ್ ಜತೆ ನಿರೂಪ್; ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟನೆ
ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರೆದಿದೆ. ವೀರಾಜಪೇಟೆ ತಾಲೂಕಿನ ಕಡಂಗ ಮರೂರು ಗ್ರಾಮದಲ್ಲಿ ಅಮ್ಮಂಡ ಸುಬ್ರಹ್ಮಣಿ (75) ಎಂಬುವರ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಸುಬ್ರಹ್ಮಣಿ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇಂದು ಬೆಳಗ್ಗೆ ಏಳು ಗಂಟೆಗೆ ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆನೆ ದಾಳಿ ಮಾಡಿದೆ.
ಕೇರಳದ ಬಂಪರ್​ ಲಾಟರಿ ಗೆದ್ದ ಉಪ್ಪಿನಂಗಡಿಯ ಮೇಸ್ತ್ರಿ: ಬಹುಮಾನದ ಮೊತ್ತ ಹುಬ್ಬೇರಿಸುವಂತಿದೆ!

ಕರೆಯುತ್ತಿದೆ ಕಾರವಾರದ ಕರಿ ಮರಳ ಕಡಲ ತೀರ…

ಲವ್​ ಬ್ರೇಕಪ್​ಗೆ ಒಪ್ಪದ ಪ್ರಿಯಕರನನ್ನು ಕೊಲೆ ಮಾಡಿದ್ದ ಆರೋಪಿ ಜೈಲಿನಿಂದ ಬಿಡುಗಡೆ! ಮಾಧ್ಯಮಗಳಿಗೆ ಆಕೆ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
