ಕಲಬುರಗಿ:ಜೀಪ್​ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲ್​ಪುರ ತಾಲ್ಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ತಡರಾತ್ರಿ ನಡೆದಿದೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪ್​ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (5) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. ಮೃತರು ಅಫಜಲ್​ಪುರ ತಾಲ್ಲೂಕಿನ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಪೂಜಾ ದೊಡ್ಡಮನಿ (30)ಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಅಫಜಲ್​ಪುರ ಕಡೆಯಿಂದ ಮಲ್ಲಾಬಾದ್ ಕಡೆ ಹೊರಟಿದ್ದ ಜೀಪ್​ ಕಲಬುರಗಿ ಕಡೆ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಜೀಪ್​ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
