ವಿಜಯಪುರ:ಯುವಕರಿಬ್ಬರ ಅಪಾಯಕಾರಿ ಬೈಕ್ ವ್ಹೀಲಿಂಗ್ ಹುಚ್ಚಾಟಕ್ಕೆ ಅವರೂ ಸೇರಿದಂತೆ ನಾಲ್ವರು ಬಲಿಯಾಗಿ, ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಬಳಿ ನಡೆದಿದೆ.
ಮುದ್ದೇಬಿಹಾಳ-ತಾಳಿಕೋಟೆ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ವ್ಹೀಲಿಂಗ್​ ಮಾಡುತ್ತಿದ್ದ ನಾಲ್ವರು ಯುವಕರು ಅಪಾಯಕಾರಿ ಸ್ಟಂಟ್​ಗೆ ಬಲಿಯಾಗಿದ್ದಾರೆ. ಮೃತರೆಲ್ಲರೂ ಮಲಗಲದಿನ್ನಿ ಗ್ರಾಮದವರು ಎಂದು ವರದಿಯಾಗಿದ್ದು, ಕುಂಟೋಜಿ ಗ್ರಾಮದಲ್ಲಿ ನಡೆಯುತ್ತಿದ್ದ ಬಸವೇಶ್ವರ ಜಾತ್ರೆ ನೋಡಲು ಇವರು ಬಂದಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ರೋಹಿತ್​-ಕೊಹ್ಲಿ ಕೂಡ ಇವರ ಮುಂದೆ ಪರದಾಡುತ್ತಾರೆ; ವೀರೇಂದ್ರ ಸೆಹ್ವಾಗ್​ ಹೇಳಿದ್ದು ಯಾರ ಬಗ್ಗೆ ಗೊತ್ತಾ?
ಈ ಕುರಿತು ಮಾತನಾಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಜಾತ್ರೆಯ ಅಂಗವಾಗಿ ವಿವಿಧ ಶಕ್ತಿ ಪ್ರದರ್ಶನದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆ ನೋಡಲು ಸುತ್ತಮುತ್ತಲಿನ ಹಳ್ಳಿಗಳಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಇವರಲ್ಲಿ ಕೆಲವು ಯುವಕರು ಬೈಕ್​ ವ್ಹೀಲಿಂಗ್​ ಮಾಡಿದ್ದಾರೆ.
ವ್ಹೀಲಿಂಗ್​ ಮಾಡುವ ವೇಳೆ ಆಯತಪ್ಪಿದ ಪರಿಣಾಮ ರಸ್ತೆ ಪಕ್ಕದಲ್ಲಿ ಮೂತ್ರ ವಿಸರ್ಜಿಸುತ್ತಿದ್ದವರಿಗೆ ವೇಗವಾಗಿ ಬಂದು ಬೈಕ್​ ಗುದ್ದಿದ್ದು, ಪರಿಣಾಮ ಬೈಕ್ ಸವಾರರೂ ಸೇರಿ ಮೂವರು ತಲೆಗೆ ಭಾರೀ ಪೆಟ್ಟಾಗಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 13 =
Remember me
