ಮೈಸೂರು:ಸಿಲಿಂಡರ್​ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.
ಕುಮಾರಸ್ವಾಮಿ. ಮಂಜುಳಾ, ಅರ್ಚನಾ, ಸ್ವಾತಿ ಮೃತರಾಗಿದ್ದಾರೆ. ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸಿಲಿಂಡರ್​ ಸೋರಿಕೆಯಾಗಿ ಮಲಗಿದ್ದಲೇ ಪ್ರಾಣ ಬಿಟ್ಟಿದ್ದಾರೆ. ಮಲಗಿದ್ದ ವೇಳೆ ಸಿಲಿಂಡರ್ ಸೋರಿಕೆಯಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಮೃತರು ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು. ಇನ್ನು ಘಟನಾ ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಲಿಂಡರ್ ಸೋರಿಕೆ ಶಂಕೆ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮೂಲತಃ ಚಿಕ್ಕಮಗಳೂರು ಸಖರಯಪಟ್ಟಣದ ಕುಟುಂಬ ಕಳೆದ 30 ವರ್ಷದಿಂದ ಮೈಸೂರಿನಲ್ಲಿ ವಾಸವಾಗಿದೆ. ನಾಲ್ವರೂ ಕಳೆದ ಗುರುವಾರ ಗುರುವಾರ ಸಂಬಂಧಿಕರ ಮದುವೆ ಹೋಗಿದ್ದರು. ಮದುವೆ ಮುಗಿಸಿಕೊಂಡು ತಮ್ಮ ಊರಾದ ಸಖರಯಪಟ್ಟಣಕ್ಕೆ ಹೋಗಿದ್ದರು. ಅಲ್ಲಿಂದ ಸೋಮವಾರ ಬೆಳಗ್ಗೆ ಮೈಸೂರಿಗೆ ವಾಪಸ್ಸಾಗಿದ್ದರು.
ಸೋಮವಾರ ರಾತ್ರಿ ಅನಿಲ ಸೋರಿಕೆಯಾಗಿದೆ. ಇದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮಂಗಳವಾರ (ಮೇ 21) ಇಡೀ ದಿನ ಮನೆಯ ಬಾಗಿಲು ತೆರೆದಿರಲಿಲ್ಲ. ಇಂದು (ಮೇ 21) ಅರ್ಚನಾ ಮತ್ತು ಸ್ವಾತಿ ಕಾಲೇಜು ಸ್ನೇಹಿತರು ಮನೆ ಬಳಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಗೊರಕೆ ಅಪಾಯಕಾರಿ! ಲೈಟ್ ಆಗಿ ತೆಗೆದುಕೊಂಡರೆ ಭಾರೀ ಬೆಲೆ ತೆರಬೇಕಾಗುತ್ತದೆ ಹುಷಾರ್​…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
