ಹಾಸನ:ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿಯಾಗಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವಿಗೀಡಾಗಿರುವ ದಾರುಣ ಘಟನೆ ಚನ್ನರಾಯಪಟ್ಟಣದ ನುಗ್ಗೆಹಳ್ಳಿ ಬಳಿಯ ಕಾರೆಹಳ್ಳಿಯಲ್ಲಿ ಶನಿವಾರ (ಫೆ.25) ತಡರಾತ್ರಿ ನಡೆದಿದೆ.
ಮೃತ ದಂಪತಿಯನ್ನು ಲೋಕೇಶ್​ ಆಚಾರಿ ಮತ್ತು ಲಕ್ಷ್ಮೀ ಎಂದು ಗುರುತಿಸಲಾಗಿದೆ. ಅವರ ಇಬ್ಬರು ಮಕ್ಕಳು ಕೂಡ ಅಸುನೀಗಿದ್ದಾರೆ. ಕಾರೇಹಳ್ಳಿ-ತಿಪಟೂರು ಮಾರ್ಗದಲ್ಲಿ ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಬೈಕ್​ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಇದನ್ನೂ ಓದಿ:ಪಾಕಿಸ್ತಾನದ ಮೊದಲ ತೃತೀಯ ಲಿಂಗಿ ಆ್ಯಂಕರ್ ಮೇಲೆ ಗುಂಡಿನ ದಾಳಿ; ಪ್ರಾಣಾಪಾಯದಿಂದ ಪಾರು
ಲೋಕೇಶ್​ ಆಚಾರಿ ತನ್ನ ಪತ್ನಿ ಮತ್ತು ಮಕ್ಕಳನ್ನು ಹೊಸೂರು ಗ್ರಾಮದಿಂದ ಕರೆದುಕೊಂಡು ನವಿಲೆ ಗ್ರಾಮಕ್ಕೆ ತೆರಳುವಾಗ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ನುಗ್ಗೆಹಳ್ಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ವರ್ಗಾಯಿಸಲಾಗುತ್ತದೆ.(ದಿಗ್ವಿಜಯ ನ್ಯೂಸ್​)
ಕಳೆದು ಹೋದ ವ್ಯಾಲೆಟ್ ಮರಳಿಸಿದ ಭಾರತೀಯ ಯುವಕನ ಪ್ರಾಮಾಣಿಕತೆ ಕಂಡು ಭಾವುಕಳಾದ ವಿದೇಶಿ ಮಹಿಳೆ

ಪುರುಷರು-ಮಹಿಳೆಯರು ಇಬ್ಬರಲ್ಲಿ ಯಾರು ಹೆಚ್ಚು ಮೋಸ ಮಾಡ್ತಾರೆ? ಯುವಕ ಕೊಟ್ಟ ಉತ್ತರ ಸಿಕ್ಕಾಪಟ್ಟೆ ವೈರಲ್​

ಕೆಸಿಸಿಗೆ ಸುರೇಶ್​ ರೈನಾ ಫಿದಾ: ಟ್ರೋಫಿ ಗೆಲುವಿನ ಬಳಿಕ ಕಿಚ್ಚನಿಗೆ ಧನ್ಯವಾದ ತಿಳಿಸಿದ ರೈನಾ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:2 × 4 =
Remember me
