
ತುಮಕೂರು:ಆಪತ್ತಿಗೆ ಸಿಲುಕಿದ್ದ ಒಬ್ಬನನ್ನು ರಕ್ಷಿಸಲು ಮೊದಲು ಇಬ್ಬರು ಧುಮುಕಿದರು. ಕೊನೆಗೆ ನಾಲ್ವರೂ ಆಪತ್ತಿನಲ್ಲಿದ್ದಿದ್ದು ಕಂಡು ಇನ್ನೊಬ್ಬರು ಧುಮುಕಿದ್ದಾರೆ. ಆದರೆ ಕೊನೆಯಲ್ಲಿ ಆಪತ್ತಿಗೆ ಸಿಲುಕಿದ್ದವ ಬಚಾವ್ ಆಗಿದ್ದು, ಉಳಿದ ನಾಲ್ವರೂ ಸಾವಿಗೀಡಾಗಿದ್ದಾರೆ. ಇಂಥದ್ದೊಂದು ದುರಂತ ಸಿದ್ಧಗಂಗಾ ಮಠ ಬಳಿ ಇರುವ ಕೆರೆಯಲ್ಲಿ ನಡೆದಿದೆ.
ಸಿದ್ಧಗಂಗಾ ಮಠದಲ್ಲಿ ನೆಲೆಸಿದ್ದ ರಂಜಿತ್ ಆಪತ್ತಿಗೆ ಸಿಲುಕಿ ಬಚಾವಾದವ. ರಂಜಿತ್ ತಾಯಿ ಲಕ್ಷ್ಮೀ, ಹರ್ಷಿತ್, ಶಂಕರ್​ ಹಾಗೂ ಮತ್ತೊಬ್ಬ ಪಾಲಕ ಮಹದೇವಪ್ಪ ಸಾವಿಗೀಡಾದವರು. ಇಂದು ಮಧ್ಯಾಹ್ನದ ಊಟದ ಬಳಿಕ ಕೈ ತೊಳೆಯಲು ಹೋಗಿದ್ದಾಗ ಈ ಪ್ರಕರಣ ನಡೆದಿದೆ.
ಮಠದಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ಮಕ್ಕಳನ್ನು ಇಂದು ಭಾನುವಾರ ರಜೆ ಇರುವ ಕಾರಣ ಪಾಲಕರು ನೋಡಲು ಬಂದಿದ್ದರು. ಮಧ್ಯಾಹ್ನ 1 ಗಂಟೆಯಲ್ಲಿ ಶಂಕರ್, ಹರ್ಷಿತ್, ರಂಜಿತ್ ಹಾಗೂ ರಂಜಿತ್ ತಾಯಿ ಲಕ್ಷ್ಮೀ ಹಾಗೂ ಸಹೋದರಿ ಸಿದ್ಧಗಂಗಾ ಮಠದ ಗೋ ಕಟ್ಟೆ ಬಳಿ ಊಟ ಮಾಡಿದ್ದರು. ಊಟದ ಬಳಿಕ ಕೈ ತೊಳೆಯಲು ರಂಜಿತ್ ಗೋ ಕಟ್ಟೆಗೆ ತೆರಳಿದ್ದ. ಆಗ ಆತ ಅಲ್ಲಿ ನೀರಿನಲ್ಲಿ ಕಾಲು ಜಾರಿ ಬಿದ್ದಿದ್ದ. ರಂಜಿತ್​ನನ್ನು ರಕ್ಷಿಸಲು ಹರ್ಷಿತ್, ಶಂಕರ್ ನೀರಿಗೆ ಹಾರಿದ್ದರು. ಆ ಮೂವರಿಗೆ ಅಪಾಯ ಆಗುವ ಸಾಧ್ಯತೆ ಇದ್ದಿದ್ದರಿಂದ ರಂಜಿತ್ ತಾಯಿ ಲಕ್ಷ್ಮೀ ಹಾಗೂ ಇನ್ನೊಬ್ಬ ಪಾಲಕ ಮಹದೇವಪ್ಪ ಕೂಡ ನೀರಿಗೆ ಧುಮುಕಿದ್ದರು.
ಇದನ್ನೂ ಓದಿದ:ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ಆದರೆ ಮೊದಲಿಗೆ ಅಪಾಯಕ್ಕೆ ಸಿಲುಕಿದ್ದ ರಂಜಿತ್ ಪ್ರಾಣಾಪಾಯದಿಂದ ಪಾರಾಗಿದ್ದು, ಉಳಿದ ಮೂವರು ನೀರಿನಲ್ಲಿ ಮುಳುಗಿ ಸಾವಿಗೀಡಾದರು. ಸದ್ಯ ಲಕ್ಷ್ಮೀ ಹಾಗೂ ಹರ್ಷಿತ್ ಮೃತದೇಹವನ್ನ ಹೊರ ತೆಗೆದಿರುವ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು, ಇನ್ನಿಬ್ಬರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹಾಗೂ ಎಸ್​ಪಿ ರಾಹುಲ್​ ಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವೈದ್ಯರು ಜನರಿಕ್ ಔಷಧ ಬರೆಯುವುದು ಕಡ್ಡಾಯ, ತಪ್ಪಿದರೆ ದಂಡ: ರಾಷ್ಟ್ರೀಯ ವೈದ್ಯಕೀಯ ಆಯೋಗ
ರಾಹುಲ್ ಗಾಂಧಿಗೆ ಹಾಲಿವುಡ್​​ನಿಂದ ಪ್ರಪೋಸಲ್ಸ್​ ಇವೆ, ಅವರ್ಯಾಕೆ ಸ್ಮೃತಿ ಇರಾನಿಗೆ ಫ್ಲೈಯಿಂಗ್ ಕಿಸ್ ಕೊಡ್ತಾರೆ?: ಸಾರಿಕಾ ಪಾಸ್ವಾನ್

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:one × three =
Remember me
