ಚೆನ್ನೈ:ಎದುರಿಗಿರುವವರು ನಗ್ನವಾಗಿ ಕಾಣುವ ಕನ್ನಡಕ ಬಗ್ಗೆ ಕೆಲವು ಸಿನಿಮಾಗಳಲ್ಲಿ ನೋಡಿದ್ದೇವೆ. ಆದರೆ ಈ ಕನ್ನಡವನ್ನು ಮಾರಾಟಕ್ಕೆ ಇಳಿದ ಕೆಲವು ಖದೀಮರು ಪೊಲೀಸರ ಬಲೆಗೆ ಬಿದ್ದಾರೆ.
ಶಿವ ಅಲಿಯಾಸ್ ಸೂರ್ಯ (39), ಕುಗೈಪ್ (37), ಜಿತು (24) ಮತ್ತು ಇರ್ಷಾದ್ (21) ಬಂಧಿತ ಆರೋಪಿಗಳು. ಬಂಧಿತರು ಬೆಂಗಳೂರಿನ ನಿವಾಸಿಗಳಾಗಿದ್ದಾರೆ.ತಮ್ಮ ಎದುರಿಗಿರುವವರನ್ನು ಬೆತ್ತಲೆಯಾಗಿ ಕಾಣಲು ಸಹಾಯ ಮಾಡುವ ಕನ್ನಡಕವನ್ನು ಮಾರಾಟ ಮಾಡುವ ನೆಪದಲ್ಲಿ ಸಾರ್ವಜನಿಕರಿಗೆ ಆಮಿಷವೊಡ್ಡುತ್ತಿದ್ದ ನಾಲ್ವರು ಆರೋಪಿಗಳನ್ನ ಚೆನ್ನೈ ಪೊಲೀಸರು ಬಂಧಿಸಿದ್ದಾರೆ.
ಈ ನಾಲ್ವರು ನಕಲಿ ಕನ್ನಡಕದಿಂದ ಎದುರಿಗಿರುವವರು ನಗ್ನವಾಗಿ ಕಾಣುತ್ತಾರೆ ಎಂದು ನಂಬಿಸಿ ದೊಡ್ಡ ಮೊತ್ತದ ಹಣಕ್ಕೆ ಮಾರಾಟ ಮಾಡಲು ಯತ್ನಿಸಿದ್ದಾರೆ. ದುಬಾರಿ ಹಣ ಕೊಟ್ಟು ಕನ್ನಡಕ ಖರೀದಿಸಿದ ಜನರು ಎದುರಿಗಿರುವವರು ನಗ್ನವಾಗಿ ಕಾಣದಿರುವುದನ್ನು ಪ್ರಶ್ನಿಸಿದರೆ ನಕಲಿ ಪಿಸ್ತೂಲ್‌ನಿಂದ ಬೆದರಿಸಿ ಹಣವನ್ನೂ ದೋಚಿದ್ದಾರೆ.
ಇದನ್ನೂ ಓದಿ:ಅಕ್ಕನ ಬದಲು ತಂಗಿಯನ್ನು ಮದುವೆಯಾಗಲು ಸಿದ್ಧನಾದ ವರ; ಮುಂದೇನಾಯ್ತ..?
ಖಚಿತ ಮಾಹಿತಿ ಮೇರೆಗೆ ಸಿಎಮ್‌ಬಿಟಿ ಪೊಲೀಸರು ಕೋಯಂಬೇಡು ಬಸ್ ನಿಲ್ದಾಣದ ಬಳಿಯ ಲಾಡ್ಜ್‌ನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಇನ್ನು ಈ ನಾಲ್ವರು ಆರೋಪಿಗಳನ್ನು ಅರೆಸ್ಟ್​​ ಮಾಡಲಾಗಿದೆ.
ಒಂದೇ ಸಮಯದಲ್ಲಿ ಗರ್ಭಿಣಿಯರಾದ ನಾಲ್ವರು ಸಹೋದರಿಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
