ಬೆಂಗಳೂರು/ಕೋಲಾರ:ರಾಜ್ಯದಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಈಜಿನ ಮೋಜಿಗೆ ಒಟ್ಟು ಆರು ಮಂದಿ ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಈ ಪ್ರಕರಣ ನಡೆದಿದೆ.
ದೇವನಹಳ್ಳಿ ತಾಲೂಕಿನ ರಾಮನಾಥಪುರ ಕೆರೆಯಲ್ಲಿ ನಾಲ್ವರು ಯುವಕರು ಸಾವಿಗೀಡಾಗಿದ್ದಾರೆ. ಕೆರೆ ದಡದಲ್ಲಿ ಪತ್ತೆಯಾದ ಬಟ್ಟೆ ಹಾಗೂ ಚಪ್ಪಲಿಗಳ ಹಿನ್ನೆಲೆಯಲ್ಲಿ ಅನುಮಾನ ಉಂಟಾಗಿ ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಕಾರ್ಯಾಚರಣೆ ನಡೆಸಿದಾಗ ಯುವಕರ ಶವಗಳು ಸಿಕ್ಕಿವೆ. ಮೃತರ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಇದನ್ನೂ ಓದಿ:ಪತಿಗಿಂತ ಪತ್ನಿಗೇ ಹೆಚ್ಚು ಸಂಪಾದನೆ; ಜೀವನಾಂಶ ನೀಡಲಾಗದು ಎಂಬುದನ್ನು ಎತ್ತಿ ಹಿಡಿದ ಕೋರ್ಟ್
ಮತ್ತೊಂದೆಡೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಗೋಣಮಕನಹಳ್ಳಿ ಗ್ರಾಮದ ನಿವಾಸಿಗಳಾದ ಕಾರ್ತಿಕ್ (14) ಮತ್ತು ಲೋಕೇಶ್ವರಿ(11) ಸಾವಿಗೀಡಾಗಿದ್ದಾರೆ. ಇವರು ಬೇಸಿಗೆ ರಜೆ ಇದ್ದ ಕಾರಣ ಹಾಗೂ ಮನೆಯಲ್ಲಿ ಯಾರೂ ಇರದ್ದರಿಂದ ಗೋಣಮಕನಹಳ್ಳಿ ಪಕ್ಕದಲ್ಲಿರುವ ಸೂರಹಳ್ಳಿ ಕೆರೆಯಲ್ಲಿ ಈಜಲು ಹೋಗಿದ್ದರು. ಆದರೆ ಅಲ್ಲಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಅಂಡರ್​​ಸನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಲಾರಿಯೊಳಕ್ಕೇ ಸಿಲುಕಿತು ಅರ್ಧ ಕಾರು, 6 ಮಂದಿ ಸ್ಥಳದಲ್ಲೇ ಸಾವು: ಭೀಕರತೆಗೆ ಎದೆ ನಲುಗಿತು ಎಂದ ಸಿಎಂ, ಪರಿಹಾರ ಘೋಷಣೆ

ನಿಮ್ಮ ದಾಖಲೆ ಬಳಸಿ ಬೇರೆಯವರು ಸಿಮ್ ಖರೀದಿಸಿದ್ದರೆ ತಿಳಿಯುವುದು ಹೇಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 4 =
Remember me
