ಬೆಂಗಳೂರು:ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿಸುತ್ತಿರುವ ಐಫೋನ್ ತಯಾರಿಕೆ ಕಂಪನಿ ಫಾಕ್ಸ್ ಕಾನ್ ಅಧ್ಯಕ್ಷ ಯಂಗ್ ಲಿಯು ಅವರೊಂದಿಗೆ ರಾಜ್ಯ ಸರ್ಕಾರ ಸೋಮವಾರ ಚೆನ್ನೈ ಖಾಸಗಿ ಹೋಟೆಲಿನಲ್ಲಿ ಫಲಪ್ರದ ಚರ್ಚೆ ನಡೆಸಿತು. ಸರ್ಕಾರದ ಪರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಇದ್ದರು.
ಮಾತುಕತೆ ನಂತರ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯಿಸಿ, ಫಾಕ್ಸ್‌ಕಾನ್ ಕಂಪನಿಯು ಕರ್ನಾಟಕದಲ್ಲಿ ಬಂಡವಾಳ ಹೂಡಲು ಮುಂದಾದರೆ ಎಲ್ಲ ರೀತಿಯ ಬೆಂಬಲ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಫಾಕ್ಸ್ ಕಾನ್ ಕಂಪನಿ ಅಧ್ಯಕ್ಷರೊಂದಿಗೆ ನಡೆದ ಮಾತುಕತೆ ನಿರೀಕ್ಷಿತ ಗತಿಯಲ್ಲಿ ಸಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.ಸರ್ಕಾರದ ಉನ್ನತ ಅಧಿಕಾರಿಗಳಾದ ಎಲೆಕ್ಟ್ರಾನಿಕ್ಸ್ , ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − nine =
Remember me
