ಬೆಂಗಳೂರು:ಐಪಿಎಸ್​ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ಹಲವರಿಗೆ ವಂಚನೆ ಮಾಡಿದ್ದವನನ್ನು ಕಾಟನ್‌ಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮದ್ದೂರು ಮೂಲದ ವಿಶುಕುಮಾರ್ (45) ಬಂಧಿತ ಆರೋಪಿ. ಮಲ್ಲೇಶ್ವರದ ನಿವಾಸಿ ಶ್ರೀನಿವಾಸ್ ಎಂಬುವರು ನೀಡಿದ ದೂರಿನನ್ವಯ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತಾನು ಪೊಲೀಸ್ ಅಧಿಕಾರಿ ಎಂದು ಹೇಳಿಕೊಳ್ಳುತ್ತಿದ್ದ ಆರೋಪಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಮತ್ತು ವರ್ಗಾವಣೆ ಮಾಡಿಸುವುದಾಗಿ ನಂಬಿಸಿ ಹಲವರಿಂದ ಹಣ ಪಡೆದು ವಂಚಿಸಿದ್ದ. ಇದೇ ರೀತಿ ಮಲ್ಲೇಶ್ವರ ನಿವಾಸಿ ಶ್ರೀನಿವಾಸ್ ಅವರಿಗೆ ತಾನು ಸಿಸಿಬಿ ಅಧಿಕಾರಿ ಎಂದು ಪರಿಚಯಿಸಿಕೊಂಡು ನಿಮಗೆ ಸರ್ಕಾರಿ ಕೆಲಸ ಕೊಡಿಸುತ್ತೇನೆ. ಸದ್ಯ ನನಗೆ ತುರ್ತಾಗಿ ಹಣದ ಅವಶ್ಯಕತೆ ಇದೆ ಅಂತ ಹೇಳಿ 25 ಲಕ್ಷ ರೂ. ಪಡೆದುಕೊಂಡಿದ್ದ.
ಇದನ್ನೂ ಓದಿ:ಅವನನ್ನು ಸೋಲಿಸಿ ಎಂದು ದೇವೇಗೌಡ್ರು ಎದೆ ಬಡ್ಕಂಡ್ರು, ಆದ್ರೂ ನಾನು ಹೆಚ್ಚಿನ ಅಂತರದಲ್ಲಿ ಗೆದ್ದೆ: ಸಚಿವ ಕೆ.ಎನ್.ರಾಜಣ್ಣ
ಹಣ ವಾಪಸ್ ಕೊಡುವಂತೆ ಕೆಲವು ದಿನಗಳ ಬಳಿಕ ಕೇಳಿದ್ದಾಗ ‘ನನ್ನನ್ನೇ ದುಡ್ಡು ಕೇಳುತ್ತೀಯಾ, ಒದ್ದು ಒಳಗೆ ಹಾಕುತ್ತೇನೆ’ ಎಂದು ಧಮ್ಕಿ ಹಾಕಿದ್ದ. ಅನುಮಾನ ಬಂದು ಸಿಸಿಬಿಗೆ ಹೋಗಿ ಈತನ ಬಗ್ಗೆ ವಿಚಾರಿಸಿದ್ದಾಗ ಆರೋಪಿಯ ಬಣ್ಣ ಬಯಲಾಗಿದೆ. ಬಳಿಕ ತಾವು ಮೋಸ ಹೋಗಿರುವುದನ್ನು ಅರಿತ ಶ್ರೀನಿವಾಸ್ ಈ ಸಂಬಂಧ ಕಾಟನ್‌ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಾನು ಎಸ್‌ಪಿ ಅಂತ ಹೇಳಿಕೊಂಡು ಪರಿಚಯ ಮಾಡಿಕೊಳ್ಳುತ್ತಿದ್ದ ಆರೋಪಿ ವಿಶುಕುಮಾರ್ ವರ್ಗಾವಣೆ ದಂಧೆಯನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿದ್ದ. ತನ್ನ ಹೆಸರನ್ನು ಭುವನ್ ವಿ. ಕುಮಾರ್ ಅಂತ ಬದಲಿಸಿಕೊಂಡು ತಾನೊಬ್ಬ ಐಪಿಎಸ್ ಅಧಿಕಾರಿ ಎಂದು ಎಲ್ಲರಿಗೂ ಪರಿಚಯ ಮಾಡಿಕೊಂಡಿದ್ದನು. ಅಲ್ಲದೆ, ತನ್ನ ಸಂಬಂಧಿಕರು ಹಿರಿಯ ಐಪಿಎಸ್ ಅಧಿಕಾರಿಗಳಿದ್ದಾರೆ. ಅವರ ಮೂಲಕ ವರ್ಗಾವಣೆ ಮಾಡಿಸಿಕೊಡುತ್ತೇನೆ ಮತ್ತು ಒಳ್ಳೆಯ ಕಡೆ ಪೋಸ್ಟಿಂಗ್ ಕೊಡಿಸುತ್ತೇನೆ ಎಂದು ನಂಬಿಸುತ್ತಿದ್ದ.
ಇದನ್ನೂ ಓದಿ:ಮಹಿಳೆಯರಿಗೆ ಉಚಿತ ಪ್ರಯಾಣ: ತಲೆ ಬಾಗಿ ನಮಿಸಿ ಬಸ್​ ಏರಿದ ಅಜ್ಜಿ!
ಈತನ ಮಾತಿಗೆ ಮರುಳಾದ ಕೆಲವು ಪೊಲೀಸರು ಪೋಸ್ಟಿಂಗ್ ಮಾಡಿಕೊಡಲು ಹಣ ನೀಡಿದ್ದಾರೆ. ಹೀಗೆ ಸುಮಾರು ಒಂದೂವರೆ ಕೋಟಿಗೂ ಅಧಿಕ ಹಣ ಪಡೆದಿದ್ದಾನೆ ಎನ್ನಲಾಗಿದೆ. ಹಣ ಪಡೆದ ಬಳಿಕ ಪೋಸ್ಟಿಂಗ್ ವಿಚಾರ ಕೇಳಿದಾಗ ಸಬೂಬು ಹೇಳುತ್ತಿದ್ದ. ಇದೇ ವೇಳೆ ಈತನ ಬಗ್ಗೆ ಕಾಟನ್‌ಪೇಟೆ ಪೊಲೀಸರಿಗೆ ದೂರು ಬಂದಿದ್ದು, ಕಾರ್ಯಾಚರಣೆಗೆ ಇಳಿದ ಪೊಲೀಸರು ಹಣ ಕೊಡುತ್ತೇನೆ ಅಂತ ದೂರುದಾರನ ಮೂಲಕ ಕರೆಸಿಕೊಂಡಿದ್ದಾರೆ. ಹಣ ಪಡೆಯಲು ಬಂದ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಮಧ್ಯಪ್ರದೇಶದಲ್ಲೂ ಮಹಿಳೆಯರಿಗೆ ಹಣ ‘ಗ್ಯಾರಂಟಿ’; ಸ್ತ್ರೀಯರ ಮತ ಸೆಳೆಯಲು ನಗದು ತಂತ್ರ!
ಪ್ರಕರಣ ಸಿಸಿಬಿಗೆ ವರ್ಗಾವಣೆ?:ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದೇ ರೀತಿ ಎಷ್ಟು ಜನರಿಗೆ ವಂಚಿಸಲಾಗಿದೆ? ಯಾರಿಗೆಲ್ಲ ವಂಚಿಸಿದ್ದಾನೆ? ಎಲ್ಲೆಲ್ಲಿ ಎಷ್ಟೆಷ್ಟು ವಂಚಿಸಿದ್ದಾನೆ ಎಂಬಿತ್ಯಾದಿ ಆಯಾಮಗಳಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಯು ಸಿಸಿಬಿ ಹೆಸರು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಈ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಂದು ಲವ್ ಜಿಹಾದ್: ಹಿಂದೂ ಯುವತಿಗೆ ಸುಳ್ಳು ಹೇಳಿ ಪ್ರೀತಿಯ ಸೋಗಲ್ಲಿ ಮೋಸ; ಬಳಿಕ ಕಿರುಕುಳ, ಕೊಲೆ ಬೆದರಿಕೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − twelve =
Remember me
