ಬೆಂಗಳೂರು:ಮಾಸ್ಟರ್​ ಆನಂದ್​ ಪುತ್ರಿ ಹಾಗೂ ಬಾಲ ನಟಿ ವಂಶಿಕಾ ಹೆಸರು ಬಳಸಿ ವಂಚನೆ ಎಸಗಿರುವ ಸಂಬಂಧ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾದ ಬೆನ್ನಲ್ಲೇ ರಾಮನಗರದ ಮೂಲದ ಆರೋಪಿ ನಿಶಾ ನರಸಪ್ಪಳ ಒಂದೊಂದೆ ವಂಚನೆ ಪ್ರಕರಣ ಇದೀಗ ಬೆಳಕಿಗೆ ಬರುತ್ತಿದೆ.
ನಿಶಾ ವಿರುದ್ಧ ಪ್ರಕರಣ ದಾಖಲಾಗಿರುವುದು ಇದೇ ಮೊದಲೇನಲ್ಲ, ಈ ಹಿಂದೆಯೂ ಪ್ರಕರಣ ದಾಖಲಾಗಿವೆ. ಇದೀಗ ವಂಶಿಕಾ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಿಶಾಳ ಒಂದೊಂದೆ ವಂಚನೆಗಳು ಬಟಾಬಯಲಾಗುತ್ತಿವೆ. ಕಳೆದ ತಿಂಗಳು ದಾಖಲಾದ ದೂರುಗಳ ಬೆನ್ನಲ್ಲೇ ಇದೀಗ ಸಾಕಷ್ಟು ಮಂದಿಯಿಂದ ನಿಶಾ ವಿರುದ್ಧ ದೂರಿನ ಸರಮಾಲೆಗಳು ಹರಿದು ಬರುತ್ತಿವೆ.
ಇದನ್ನೂ ಓದಿ:ನಿಮ್ಮ ದಿನಚರಿಯಲ್ಲಿ ಈ ಒಂದು ಬದಲಾವಣೆ ಮಾಡಿದ್ರೆ ಸಾಕು ಹೃದಯ, ಲಿವರ್​ ಸದಾ ಆರೋಗ್ಯವಾಗಿರುತ್ತವೆ!
ತಾರಾ ಎಂಬುವರಿಗೆ ಇಪ್ಪತ್ತು ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪ ಇದೀಗ ಕೇಳಿಬಂದಿದೆ. ಈವೆಂಟ್ ಮ್ಯಾನೇಜ್​ಮೆಂಟ್​ ಹೆಸರಲ್ಲಿ ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಳೆದ ತಿಂಗಳು ಯಲಹಂಕ ನ್ಯೂ ಟೌನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೇ ರೀತಿ ಕೋಣನಕುಂಟೆ ಹಾಗೂ ಜ್ಞಾನಭಾರತಿ ಠಾಣೆಯಲ್ಲಿಯೂ ವಂಚನೆ ದೂರುಗಳು ದಾಖಲಾಗಿವೆ.
ಸದಾಶಿವನಗರ ಠಾಣೆಯಲ್ಲಿ ದಾಖಲಾದ ಕೇಸ್​ನಲ್ಲಿ ಬರೋಬ್ಬರಿ 35 ಲಕ್ಷ ರೂ. ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ. ಸಾಲದ ರೂಪದಲ್ಲಿ ಬಂಡವಾಳ ಹೂಡಿದರೆ ಲಾಭಾಂಶ ನೀಡುವುದಾಗಿ ವಂಚಿಸಿದ್ದಾಳೆ. ಮೊದ ಮೊದಲು ಲಾಭಾಂಶದ ಹಣ ಕೊಟ್ಟು ನಂಬಿಸಿ, ಆ ಬಳಿಕ ಎರಡರಷ್ಟು ಹಣ ಪಡೆದು ವಂಚನೆ ಮಾಡಿದ್ದಾಳೆ.
ನಿಶಾ, ಬೆಂಗಳೂರಿನ ದೊಡ್ಡ ಮಾಲ್​​ಗಳಲ್ಲಿ ಈವೆಂಟ್ ಮ್ಯಾನೇಜ್ಮೆಂಟ್ ಮಾಡುತ್ತಿದ್ದಳು. ಬೆಂಗಳೂರು ಮಾತ್ರವಲ್ಲದೆ, ನಗರದ ಹೊರಹೊಲಯದಲ್ಲಿನ ರೆಸಾರ್ಟ್​ಗಳಲ್ಲಿ ಶೂಟಿಂಗ್ ಮಾಡುವ ಮೂಲಕ ಪೋಷಕರಿಗೆ ಮಕ್ಮಲ್ ಟೋಪಿ ಹಾಕುತ್ತಿದ್ದಳು. ಕೇವಲ ಮಕ್ಕಳಷ್ಟೇ ಅಲ್ಲ ಸಾಕಷ್ಟು ಮಂದಿಗೆ ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದಾಳೆ.
ಇದನ್ನೂ ಓದಿ:ಮೋದಿಗೆ ಫ್ರಾನ್ಸ್​ನ ಅತ್ಯುನ್ನತ ಗೌರವ: ಗ್ರ್ಯಾಂಡ್​ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ಪ್ರದಾನ; ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿ
ಸದ್ಯ ಸದಾಶಿವನಗರ ಠಾಣೆಗೆ ಬರುತ್ತಿರುವ ದೂರುಗಳನ್ನು ತಮ್ಮ ಮನೆ ವ್ಯಾಪ್ತಿಯ ಠಾಣೆಯಲ್ಲಿ ನೀಡಲು ಸೂಚನೆ ನೀಡಲಾಗಿದೆ. ಹೈಕೋರ್ಟ್​ನಲ್ಲೂ ಓರ್ವ ಮಹಿಳೆ ಕೇಸ್ ಹಾಕಿದ್ದು, ವಿಚಾರಣೆಯ ಹಂತದಲ್ಲಿದೆ. ಲಕ್ಷಾಂತರ ರೂ. ಹಣದಲ್ಲಿ ಲಕ್ಸುರಿ ಲೈಫ್ ಲೀಡ್ ಮಾಡ್ತಿದ್ದ ನಿಶಾ ನರಸಪ್ಪ, ಇದೀಗ ವಂಶಿಕಾ ಪ್ರಕರಣದಲ್ಲಿ ತಗ್ಲಾಕ್ಕೊಂಡಿದ್ದಾಳೆ. ಆಕೆಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.(ದಿಗ್ವಿಜಯ ನ್ಯೂಸ್​)
ಏಕಕಾಲದಲ್ಲಿ ಯುವಕರಿಬ್ಬರನ್ನು ಮದ್ವೆಯಾಗಲು ಸಬ್​ ರಿಜಿಸ್ಟ್ರಾರ್​ ಕಚೇರಿಗೆ ಅರ್ಜಿ ಸಲ್ಲಿಸಿದ ಯುವತಿಗೆ ಶಾಕ್​!

ಟೊಮ್ಯಾಟೊ ಬೆಲೆ ಕೆ.ಜಿ.ಗೆ 300 ರೂ.ಗೆ ಜಿಗಿಯುವ ಸಂಭವ: ಬೆಲೆ ಸ್ಥಿರಗೊಳ್ಳಲು ಕನಿಷ್ಠ 2 ತಿಂಗಳು ಅಗತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + sixteen =
Remember me
