ಬೆಂಗಳೂರು:ಮತದಾನ ಜಾಗೃತಿ ಹಾಗೂ ಮತ ಚಲಾಯಿಸುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಹೋಟೆಲ್​ನವರು ಮತದಾರರಿಗೆ ಉಚಿತ ಅಥವಾ ರಿಯಾಯಿತಿ ದರದಲ್ಲಿ ತಿಂಡಿ ನೀಡಲು ಮುಂದಾಗಿದ್ದಕ್ಕೆ ಚುನಾವಣಾಧಿಕಾರಿ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ವಿರುದ್ಧ ಹೋಟೆಲ್ ಮಾಲೀಕರ ಸಂಘಟನೆ ಹೈಕೋರ್ಟ್ ಮೆಟ್ಟಿಲೇರಿದ್ದು, ಕೊನೆಗೂ ಹೋಟೆಲ್ ಮಾಲೀಕರ ಉಚಿತ/ರಿಯಾಯಿತಿ ದರದ ತಿಂಡಿ ನೀಡಲು ಅವಕಾಶ ಸಿಕ್ಕಿದೆ.
ಇದನ್ನೂ ಓದಿ:ಸುಮ್ಮನಿರುವ ಇವರಿಗಿದೆ ಚುನಾವಣಾ ಫಲಿತಾಂಶವನ್ನೇ ಬದಲಿಸುವ ಶಕ್ತಿ!; ಇವರ್ಯಾರು?
ನಾಳೆ ನಡೆಯಲಿರುವ ಚುನಾವಣೆಯಲ್ಲಿ ಹೆಚ್ಚಿನ ಮತದಾನ ಆಗಬೇಕು ಎಂಬ ಸದುದ್ದೇಶದಿಂದ ಬೆಂಗಳೂರಿನ ಎರಡು ಹೋಟೆಲ್​ನವರು ಮತದಾರರಿಗೆ ಪ್ರೋತ್ಸಾಹಕರವಾಗಿ ಉಚಿತ ಹಾಗೂ ರಿಯಾಯಿತಿ ದರದಲ್ಲಿ ತಿಂಡಿತಿನಿಸು ನೀಡುವ ಘೋಷಣೆ ಮಾಡಿದ್ದರು. ಆದರೆ ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಒಂದು ವೇಳೆ ಉಚಿತ ಇಲ್ಲವೇ ರಿಯಾಯಿತಿ ದರದಲ್ಲಿ ಮತದಾರರಿಗೆ ತಿಂಡಿತಿನಿಸು ನೀಡಿದರೆ ಕಾನೂನುಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದರು. ಹಾಗೆಯೇ ಬಿಬಿಎಂಪಿ ಕೂಡ ಕಾನೂನುಕ್ರಮದ ಎಚ್ಚರಿಕೆ ನೀಡಿತ್ತು.
ಇದನ್ನೂ ಓದಿ:ಮತದಾನ ಮಾಡಿದವರಿಗೆ ಉಚಿತ ಆಹಾರ; ಚುನಾವಣಾ ಆಯೋಗದಿಂದ ಖಡಕ್​ ಸೂಚನೆ
ಇದನ್ನು ಪ್ರಶ್ನಿಸಿ ಬೃಹತ್ ಬೆಂಗಳೂರು ಹೋಟೆಲುಗಳ ಸಂಘದವರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಹೈಕೋರ್ಟ್​ ಹೋಟೆಲ್ ಮಾಲೀಕರ ಪರವಾಗಿ ನಿಂತಿದೆ. ಮಾತ್ರವಲ್ಲ, ಮತದಾನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರೋತ್ಸಾಹಕರವಾಗಿ ಉಚಿತ ಇಲ್ಲವೇ ರಿಯಾಯಿತಿ ದರದಲ್ಲಿ ತಿಂಡಿತಿನಿಸು ನೀಡಲು ಅವಕಾಶ ಮಾಡಿಕೊಟ್ಟಿದೆ. ಎಚ್ಚರಿಕೆ ಕ್ರಮದ ಬಿಬಿಎಂಪಿ ಆದೇಶವನ್ನು ನ್ಯಾ.ಶಿವಶಂಕರೇಗೌಡ ಅವರು ರದ್ದು ಮಾಡಿ ಈ ಮೇಲಿನ ಆದೇಶ ನೀಡಿದ್ದಾರೆ.
ಹನ್ನೊಂದರ ಈ ಹುಡುಗಿ ಐನ್​ಸ್ಟೀನ್​-ಸ್ಟೀಫನ್ ಹಾಕಿಂಗ್​ಗಿಂತಲೂ ಬುದ್ಧಿವಂತೆ!

ನಾನು ಬದುಕಿದ್ದಾಗಲೇ ಸಾಯೋದಕ್ಕೆ ಇಷ್ಟಪಡ್ತೀನಿ!: ನಿರ್ದೇಶಕ ಉಪೇಂದ್ರ ಹೀಗಂದಿದ್ಯಾಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
