ಬೆಂಗಳೂರು:ಚುನಾವಣೆಪೂರ್ವದಲ್ಲಿ ಐದು ಗ್ಯಾರಂಟಿಗಳ ಭರವಸೆ ನೀಡಿ ಬಳಿಕ ಭರ್ಜರಿ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಉಚಿತ ಯೋಜನೆ ಸಂಬಂಧ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದೆ.
ಮಹಿಳೆಯರಿಗೆ ಸರ್ಕಾರಿ ಬಸ್​​ನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸುವ ಶಕ್ತಿ ಯೋಜನೆ, ಪದವೀಧರ ಹಾಗೂ ಡಿಪ್ಲೊಮಾ ಮುಗಿಸಿದ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡುವ ಯುವನಿಧಿ, ಅಂತ್ಯೋದಯ ಹಾಗೂ ಬಿಪಿಎಲ್​ ಕಾರ್ಡ್​ದಾರರಿಗೆ ಅನ್ನಭಾಗ್ಯ, ಬಡ ಮಹಿಳೆಯರಿಗೆ ನಗದು ನೆರವಿನ ಗೃಹಲಕ್ಷ್ಮೀ ಮಾತ್ರವಲ್ಲದೆ, ಪ್ರತಿ ಮನೆಗೆ 200 ಯುನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಐದು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೆ ತಂದಿದೆ.
ಇದನ್ನೂ ಓದಿ:ಫ್ಯಾಕ್ಟ್​ ಚೆಕ್ ಮೂಲಕ ಮತ್ತೆ ಮೋದಿ ಬೆಂಬಲಿಗರ ಕಾಲೆಳೆದ ನಟ ಪ್ರಕಾಶ್ ರಾಜ್
ಇದೀಗ ಉಚಿತ ಯೋಜನೆ ಸಂಬಂಧ ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಸಣ್ಣ ನೇಕಾರರಿಗೆ 10 ಎಚ್​​ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಘೋಷಿಸಿದ್ದಾರೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೇಕಾರರ ನಿಯೋಗದ ಜತೆ ಚರ್ಚಿಸಿದ ಬಳಿಕ ಸಿಎಂ ನಿರ್ಣಯ ಪ್ರಕಟಿಸಿದರು.
ನೇಕಾರರ ಬಹುದಿನಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವ ಮಹತ್ವದ ನಿರ್ಣಯ ಕೈಗೊಂಡಿದ್ದೇನೆ.– ಮುಖ್ಯಮಂತ್ರಿ@siddaramaiah
— CM of Karnataka (@CMofKarnataka)August 25, 2023

ಒಬ್ಬ ಮಗನಿದ್ರೂ ಮತ್ತೆ ಗಂಡು ಮಗುವಾಗಿಲ್ಲ ಅಂತ ಮಕ್ಕಳ ಸಹಿತ ಬಾವಿಗೆ ಹಾರಿದ್ಲು; ಮೂವರು ಮಕ್ಕಳೂ ಸಾವು, ತಾಯಿ ಬಚಾವ್!

100 ಕೋಟಿ ರೂ. ಚೆಕ್​ ದೇಣಿಗೆಯಾಗಿ ಕೊಟ್ಟ ಭಕ್ತ; ಆಮೇಲಿನ ಸಂಗತಿ ಮೂಡಿಸಿತು ಅಚ್ಚರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
